ಹೈದರಾಬಾದ್; ಹೈದರಾಬಾದ್’ನ 17ನೇ ಶತಮಾನದ ಪುರಾತನ ಮಕ್ಕಾ ಮಸೀದಿ ಸ್ಫೋಟಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ 5 ಆರೋಪಿಗಳನ್ನು ನಾಂಪಲ್ಲಿ ವಿಶೇಷ ನ್ಯಾಯಾಲಯ ಸೋಮವಾರ ಖುಲಾಸೆಗೊಳಿಸಿದೆ.2007ರ ಮೇ. 18 ರಂದು ಮೆಕ್ಕಾ ಮಸೀದಿಯಲ್ಲಿ ಪ್ರಬಲ ಬಾಂಬ್ ಸ್ಫೋಟಗೊಳಿಸಲಾಗಿತ್ತು. ಘಟನೆಯಲ್ಲಿ 9 ಮಂದಿ ಸಾವನ್ನಪ್ಪಿ, 58ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದರು.
ಸ್ಫೋಟ ಸಂಭವಿಸುತ್ತಿದ್ದಂತೆಯೇ ವಿಶೇಷ ತನಿಖಾ ದಳವನ್ನು ರಚನೆ ಮಾಡಲಾಗಿತ್ತು. ಬಳಿಕ ಹೈದರಾಬಾದ್ ಪೊಲೀಸ್ ಆಯುಕ್ತ ಬಲ್ವೀಂದರ್ ಸಿಂಗ್ ಅವರು ಪ್ರಕರಣ ತನಿಖೆಯನ್ನು ಕೈಗೆತ್ತಿಕೊಂಡಿದ್ದರು.
2011ರಲ್ಲಿ ಈ ಪ್ರಕರಣವನ್ನು ಸಿಬಿಐನಿಂದ ಎನ್ಐಎಗೆ ಹಸ್ತಾಂತರ ಮಾಡಲಾಗಿತ್ತು ಪ್ರಕರಣದ 10 ಜನರನ್ನು ಆರೋಪಿಗಳನ್ನು ಮಾಡಲಾಗಿತ್ತು. ಅದರಲ್ಲಿ ಐವರಾದ ಅಸೀಮಾನಂದ, ದೇವೇಂದ್ರ ಗುಪ್ತಾ, ಲೋಕೇಶ್ ಶರ್ಮಾ, ಭರತ್ ಮೋಹನ್ ಲಾಲ್ ರತೇಶ್ವರ್, ಮೋಹನ್ ಲಾಲ್ ಚೌಧರಿಯನ್ನು ಬಂಧಿಸಲಾಗಿತ್ತು. ಇದೀಗ ವಿಶೇಷ ನ್ಯಾಯಾಲಯವು ಪ್ರಕರಣದಲ್ಲಿ ಆರೋಪಿಗಳಾಗಿದ್ದ ಎಲ್ಲರನ್ನೂ ಖುಲಾಸೆಗೊಳಿಸಿದೆ.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ