ಬೆಳ್ತಂಗಡಿ: ಜಾರಿ ನಿರ್ದೇಶನಾಲಯ (ಈಡಿ) ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಬ್ಯಾಂಕ್ ಖಾತೆ ಮುಟ್ಟುಗೋಲು ಹಾಕಿರುವುದನ್ನು ವಿರೋಧಿಸಿ ಶುಕ್ರವಾರ ಬೆಳ್ತಂಗಡಿ ಯಲ್ಲಿ ಪಿಎಫ್ಐ ಕಾರ್ಯಕರ್ತರು ನಗರದ ಮೂರು ಮಾರ್ಗದ ಬಳಿ ಪ್ರತಿಭಟನೆ ನಡೆಸಿದರು.
ಬ್ಯಾಂಕ್ ಖಾತೆಗಳ ಮೇಲೆ ತಾತ್ಕಾಲಿಕ ಮುಟ್ಟುಗೋಲು ಹಾಕಿದ ED ಕ್ರಮದ ವಿರುದ್ಧ ಕಾರ್ಯಕರ್ತರು ಆಕ್ರೋಶ ಹೊರಹಾಕಿ, ED, RSS ,BJP ವಿರುದ್ದ ಘೋಷಣೆ ಕೂಗಿದರು.
ಈ ವೇಳೆ ಮಾತನಾಡಿದ ಪಾಪ್ಯುಲರ್ ಫ್ರಂಟ್ ಬೆಳ್ತಂಗಡಿ ಜಿಲ್ಲಾ ಕಾರ್ಯದರ್ಶಿ ತ್ವಾಹೀರ್ ಪುಂಜಾಲಕಟ್ಟೆ ಪಾಪ್ಯುಲರ್ ಫ್ರಂಟ್ ಸಂಘಟನೆಯನ್ನು ಈಡಿ ಮತ್ತು ಎನ್ ಐ ಎ ಮೂಲಕ ಆರ್ ಎಸ್ ಎಸ್ ಮತ್ತು ಬಿ ಜೆ ಪಿ ಹೆದರಿಸಲು ನೋಡುತ್ತಿದೆ. ಇದು ಅಧಿಕಾರದ ದುರ್ಬಳಕೆ ಮತ್ತು ಪ್ರಜಾಸತ್ತಾತ್ಮಕ ಹಕ್ಕಿನ ನಿರಾಕರಣೆಯಾಗಿದೆ. ಯಾವುದೇ ಕಾರಣಕ್ಕೂ ಇಂತಹ ಬೆದರಿಕೆಗಳಿಗೆ ಹೆದರುವುದಿಲ್ಲ ಎಂದು ಹೇಳಿದರು.