ಸುರತ್ಕಲ್ : ಕಳೆದ ರಾತ್ರಿ ಕೃಷ್ಣಾಪುರ 6ನೇ ಬ್ಲಾಕ್ ಮದ್ರಸದ ಆರನೇ ತರಗತಿಯ ವಿದ್ಯಾರ್ಥಿಯ ಮೇಲೆ ಇಬ್ಬರು ದುಷ್ಕರ್ಮಿಗಳು ಹಲ್ಲೆ ನಡೆಸಿದ್ದು ಇದನ್ನು ಎಸ್.ಜೆ.ಎಂ.ಬಜ್ಪೆ ರೇಂಜ್ ಸಮಿತಿಯು ತೀವ್ರವಾಗಿ ಖಂಡಿಸುತ್ತದೆ.
ವಿದ್ಯೆ ಕಲಿಯುವ ಪುಟಾಣಿಗಳನ್ನು ಗುರಿಯಾಗಿಸಿ ಅವರ ಮೇಲೆ ದೈಹಿಕ ಹಲ್ಲೆ ನಡೆಸಿರುವುದು ಅಕ್ಷಮ್ಯ ಅಪರಾಧವಾಗಿದೆ. ಇಂತಹ ಹೇಯಕೃತ್ಯಗಳ ಮೂಲಕ ಸಮಾಜವನ್ನು ಒಡೆಯುವ ಹಾಗೂ ಕ್ಷೋಭೆಯನ್ನುಂಟು ಮಾಡುವ ಕಿಡಿಗೇಡಿಗಳನ್ನು ತಕ್ಷಣ ಬಂಧಿಸಿ ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಪೊಲೀಸ್ ಇಲಾಖೆಯನ್ನು ನಾವು ಒತ್ತಾಯಿಸುತ್ತಿದ್ದೇವೆ. ಮಾತ್ರವಲ್ಲದೆ ವಿದ್ಯಾರ್ಥಿಗಳಲ್ಲಿ ಅಭಧ್ರತಾ ಭಾವನೆ ಮೂಡದಂತೆ ಪೊಲೀಸ್ ಇಲಾಖೆಯು ಎಚ್ಚರವಹಿಸಬೇಕು ಹಾಗೂ ಮುಂದೆ ಇಂತಹ ಪ್ರಕರಣಗಳು ಮರುಕಳಿಸದಿರಲು ಈ ಅಪರಾಧಿಗಳಿಗೆ ಗರಿಷ್ಠ ಶಿಕ್ಷೆ ನೀಡಬೇಕೆಂದು ಪೊಲೀಸ್ ಇಲಾಖೆಯೊಂದಿಗೆ ನಾವು ಮನವಿ ಮಾಡುತ್ತಿದ್ದೇವೆ.
ಅಧ್ಯಕ್ಷರು ಹಾಗೂ ಸದಸ್ಯರು
ಸುನ್ನೀ ಜಂಇಯ್ಯತುಲ್ ಮುಅಲ್ಲಿಮೀನ್
ಬಜ್ಪೆ ರೇಂಜ್
















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ