janadhvani

Kannada Online News Paper

ಭಾರೀ ಮಳೆ: ದ.ಕ ಹಾಗೂ ಉಡುಪಿ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ನಾಳೆ ರಜೆ

ಈ ವರದಿಯ ಧ್ವನಿಯನ್ನು ಆಲಿಸಿ

ಮಂಗಳೂರು,ಜೂನ್.30: ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ನಾಳೆ (ಶುಕ್ರವಾರ) ಕೂಡ ಶಾಲಾ ಕಾಲೇಜಿಗಳಿಗೆ ರಜೆ ಘೋಷಿಸಲಾಗಿದೆ.

ನಾಳೆ ಬೆಳಿಗ್ಗೆ 8.30 ರವರೆಗೆ ಆರೆಂಜ್ ಅಲರ್ಟ್ ಘೋಷಿಸಿರುವುದರಿಂದ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಶುಕ್ರವಾರ ಕೂಡ ಜಿಲ್ಲೆಯಾದ್ಯಂತ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ರಜೆ ನೀಡುವಂತೆ ಜಿಲ್ಲಾಧಿಕಾರಿ ಕೆ ವೈ ರಾಜೇಂದ್ರ ಆದೇಶ ಹೊರಡಿಸಿದ್ದಾರೆ.

ಉಡುಪಿ ಜಿಲ್ಲೆಯಾದ್ಯಂತ ಬಾರೀ ಮಳೆಯಾಗುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ, ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಆದೇಶ ಹೊರಡಿಸಿದ್ದಾರೆ.

ಮಳೆಯಿಂದ ತಗ್ಗು ಪ್ರದೇಶಗಳು ಜಲಾವೃತವಾಗುತ್ತದ್ದು, ಉಡಪಿ ನಗರ ಸೇರಿದಂತೆ ಕಾಪು ಕಾರ್ಕಳ, ಕುಂದಾಪುರ ಹಾಗೂ ಬೈಂದೂರು ಭಾಗದಲ್ಲೂ ಉತ್ತಮ ಮಳೆಯಾಗುತ್ತಿದ್ದು, ಕೆಲವೆಡೆ ವಿದ್ಯುತ್ ಕಂಬಗಳು, ಬೃಹತ್ ಗಾತ್ರದ ಮರಗಳು ದರೆಗುರುಳಿದೆ.

ಮಳೆಯಿಂದ ಯಾವುದೇ ಅನಾಹುತ ಸಂಬಂಧಿಸಿದಂತೆ ಜಿಲ್ಲಾಡಳಿತ ಮುನ್ನೆಚ್ಚರಿಕೆ ವಹಿಸಿದ್ದು, ಸಮುದ್ರ ತೀರ ಹಾಗೂ ನದಿ ತೀರದ ಜನರು ಎಚ್ಚರಿಕೆ ಇರುವಂತೆ ಎಚ್ಚರಿಕೆ ನೀಡಿದೆ. ನೀರಿನ ಮಟ್ಟ ಹೆಚ್ಚಾದಲ್ಲಿ ಸುರಕ್ಷಿತ ಪ್ರದೇಶಗಳಿಗೆ ತೆರಳುವಂತೆ ಸೂಚನೆ ನೀಡಿದೆ.

error: Content is protected !! Not allowed copy content from janadhvani.com