ರಿಯಾದ್: ಸೌದಿ ಅರೇಬಿಯಾದಲ್ಲಿ ಆಗಸ್ಟ್‌ನಲ್ಲಿ ಬಿಸಿಲಿನ ತಾಪ ಹೆಚ್ಚಲಿದೆ. ದೇಶದ ಕೆಲವು ಭಾಗಗಳಲ್ಲಿ ತಾಪಮಾನವು 50 ಡಿಗ್ರಿ ಸೆಲ್ಸಿಯಸ್ ಅಥವಾ ಅದಕ್ಕಿಂತ ಹೆಚ್ಚು ತಲುಪುವ ಸಾಧ್ಯತೆಯಿದೆ ಎಂದು ರಾಷ್ಟ್ರೀಯ ಹವಾಮಾನ ಕೇಂದ್ರ ತಿಳಿಸಿದೆ.
ರಾಷ್ಟ್ರೀಯ ಹವಾಮಾನ ಕೇಂದ್ರದ ವಕ್ತಾರ ಹುಸೇನ್ ಅಲ್ಕಹ್ತಾನಿ ಮಾತನಾಡಿ, ಒಳನಾಡಿನ ಪ್ರದೇಶಗಳನ್ನು ಹೊರತುಪಡಿಸಿ ಮದೀನಾ ಮತ್ತು ಪೂರ್ವ ಕರಾವಳಿ ಪ್ರದೇಶದ ಕೆಲವು ಭಾಗಗಳಲ್ಲಿ ತಾಪಮಾನವು 50 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚಾಗಿರುತ್ತದೆ. ಪ್ರಸ್ತುತ, ಖಸಿಮ್ ಪ್ರಾಂತ್ಯ ಸೇರಿದಂತೆ ಸೌದಿ ಅರೇಬಿಯಾದ ಮಧ್ಯ ಪ್ರದೇಶದಲ್ಲಿ 49 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.