ಪುತ್ತೂರು :- ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ 2022-23 ನೇ ಸಾಲಿನ ಸದಸ್ಯತ್ವ ಅಭಿಯಾನಕ್ಕೆ ಪುತ್ತೂರಿನಲ್ಲಿ ಚಾಲನೆ ನೀಡಲಾಯಿತು. ಕ್ಯಾಂಪಸ್ ಫ್ರಂಟ್ ಪುತ್ತೂರು ಅಧ್ಯಕ್ಷರಾದ ಆರಿಫ್ ಬೆಟ್ಟಂಪಾಡಿರವರು ವಿದ್ಯಾರ್ಥಿಗಳಿಗೆ ಸದಸ್ಯತ್ವ ಕೂಪನ್ ವಿತರಿಸುವ ಮೂಲಕ ಚಾಲನೆ ನೀಡಿದರು.
“ನಮ್ಮ ಶಿಕ್ಷಣ, ಹಕ್ಕು, ಪ್ರತಿರೋಧ” ಎಂಬ ಘೋಷವಾಕ್ಯದಡಿ ಈ ಬಾರಿಯ ಸದಸ್ಯತ್ವ ಅಭಿಯಾನ ನಡೆಯಲಿದ್ದು, ಜುಲೈ 25 ರಿಂದ ಆಗಸ್ಟ್ 30 ರವರೆಗೆ ಅಭಿಯಾನ ನಡೆಯಲಿದೆ. ಕ್ಯಾಂಪಸ್ ಫ್ರಂಟ್ 13 ವರ್ಷಗಳಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ,ಸಾಮಾಜಿಕ ಪಿಡುಕುಗಳ ನಿರ್ಮೂಲನೆಗಾಗಿ, ವಿದ್ಯಾರ್ಥಿಗಳ ಹಕ್ಕುಗಳ ಸಂರಕ್ಷಣೆಗಾಗಿ, ಸಮಾಜದಲ್ಲಿ ಪ್ರಭುತ್ವವು ನಡೆಸುತ್ತಿರುವ ಅನ್ಯಾಯಗಳ ವಿರುಧ್ದದ ಹೋರಾಟದಲ್ಲಿ ರಾಜ್ಯದಲ್ಲಿ ಜವಾಬ್ದಾರಿಯುತ ವಿದ್ಯಾರ್ಥಿ ಸಂಘಟನೆಯಾಗಿ ಮುಂಚೂಣಿಯಲ್ಲಿದೆ.
ಶೈಕ್ಷಣಿಕ ವಲಯಗಳಲ್ಲಿ ವಿದ್ಯಾರ್ಥಿಗಳು ಸಾಧನೆಗೈಯಲು ಅವರಿಗೆ ಬೇಕಾದ ಎಲ್ಲಾ ರೀತಿಯ ಪ್ರೋತ್ಸಾಹಗಳು ನೀಡುತ್ತಿದ್ದು ಅದರೊಂದಿಗೆ ವಿವಿಧ ಜಾಗೃತಿ ಕಾರ್ಯಕ್ರಮಗಳು, ದೇಶದ ಸಂವಿಧಾನಕ್ಕೆ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆ ತರುವವರ ವಿರುಧ್ದ ರಾಜಿರಹಿತ ಹೋರಾಟ ಕ್ಯಾಂಪಸ್ ಫ್ರಂಟ್ ವಿದ್ಯಾರ್ಥಿಗಳ ಮುಂದಿಡುವ ಆಶಯವಾಗಿದೆ. ಈ ನಿಟ್ಟಿನಲ್ಲಿ “ನಮ್ಮ ಶಿಕ್ಷಣ, ಹಕ್ಕು, ಪ್ರತಿರೋಧ” ಘೋಷವಾಕ್ಯದಡಿ ಈ ಸದಸ್ಯತ್ವ ಅಭಿಯಾನ ನಡೆಸುತ್ತಿದ್ದೇವೆ ಎಂದು ಕ್ಯಾಂಪಸ್ ಫ್ರಂಟ್ ಪುತ್ತೂರು ಜಿಲ್ಲಾಧ್ಯಕ್ಷರಾದ ಆರಿಫ್ ಬೆಟ್ಟಂಪಾಡಿ ರವರು ತಿಳಿಸಿದರು.
ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಪುತ್ತೂರು ಜಿಲ್ಲಾ ಕಾರ್ಯದರ್ಶಿ ಫಾರೂಕ್ ಕಟ್ಟತ್ತಾರ್ ಹಾಗು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.