janadhvani

Kannada Online News Paper

6 ವರ್ಷಗಳು ಪೂರ್ಣಗೊಂಡರೆ ಮಾತ್ರ ಶಾಲೆ ಸೇರ್ಪಡೆಗೆ ಅವಕಾಶ- ಶಿಕ್ಷಣ ಇಲಾಖೆ

ಒಂದನೇ ತರಗತಿಗೆ ದಾಖಲಿಸಲು ವಯೋಮಿತಿಯನ್ನು ನಿಗದಿಪಡಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಆದೇಶಿಸಿದೆ.

ಬೆಂಗಳೂರು, ಜು.26: ಆರ್ ಟಿಇ ಕಾಯ್ದೆ 2009 ಮತ್ತು ಕಡ್ಡಾಯ ಶಿಕ್ಷಣ ನಿಯಮಗಳು 2012ರಂತೆ ಶೈಕ್ಷಣಿಕ ವರ್ಷದ ಜೂನ್ ಒಂದನೇ ತಾರೀಖಿಗೆ ಕಡ್ಡಾಯವಾಗಿ 6 ವರ್ಷಗಳು ಪೂರ್ಣಗೊಂಡಿರುವ ಮಗುವನ್ನು ಒಂದನೇ ತರಗತಿಗೆ ದಾಖಲಿಸಲು ವಯೋಮಿತಿಯನ್ನು ನಿಗದಿಪಡಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಆದೇಶಿಸಿದೆ.

2016-17ನೇ ಶೈಕ್ಷಣಿಕ ಸಾಲಿನಿಂದ ಆರ್ ಟಿಇ ಕಾಯ್ದೆ 2009ರ ಸೆಕ್ಷನ್ 12(1)(ಸಿ) ಅಡಿಯಲ್ಲಿ ಅನುದಾನರಹಿತ ಹಾಗೂ ಅಲ್ಪಸಂಖ್ಯಾತ ಸಂಸ್ಥೆಗಳ ವಿದ್ಯಾರ್ಥಿಗಳ ಪ್ರವೇಶಾತಿಗೆ ಸಂಬಂಧಿಸಿದಂತೆ ಎಲ್‌ಕೆಜಿ ತರಗತಿಗೆ 3 ವರ್ಷ 10 ತಿಂಗಳಿನಿಂದ 4ವರ್ಷ 10 ತಿಂಗಳು ಹಾಗೂ 1ನೇ ತರಗತಿಗೆ 5 ವರ್ಷ 10 ತಿಂಗಳಿನಿಂದ 6 ವರ್ಷ 10 ತಿಂಗಳು ವಯೋಮಿತಿಯನ್ನು ನಿಗದಿಪಡಿಸಲಾಗಿತ್ತು.

2012ರಲ್ಲಿ ಕಡ್ಡಾಯ ಶಿಕ್ಷಣ ನಿಯಮಗಳು ಜಾರಿಗೊಳಿಸಿದ್ದು, ಅದರಂತೆ ಒಂದನೇ ತರಗತಿಗೆ ದಾಖಲಾಗಲು ಮಗುವಿಗೆ ಕನಿಷ್ಟ ವಯೋಮಿತಿಯನ್ನು 5 ವರ್ಷ 5 ತಿಂಗಳಿಗೆ ಹಾಗೂ ಗರಿಷ್ಠ 7 ವರ್ಷಗಳಿಗೆ ನಿಗದಿಪಡಿಸಲಾಗಿತ್ತು. ಪರಿಷ್ಕರಿಸಿ 2020ರಲ್ಲಿ ಎಲ್‌ಕೆಜಿ ದಾಖಲಾತಿಗೆ 3 ವರ್ಷ 5 ತಿಂಗಳು ಹಾಗೂ ಒಂದನೇ ತರಗತಿಗೆ 5 ವರ್ಷ 5 ತಿಂಗಳು ವಯೋಮಿತಿಯನ್ನು ನಿಗದಿಪಡಿಸಲಾಗಿರುತ್ತದೆ.

ಈಗ ಹಿಂದಿನ ಆದೇಶ ಮತ್ತು ಸುತ್ತೋಲೆಗಳನ್ನು ಪರಿಶೀಲಿಸಿ ಹಿಂದಿನ ಆದೇಶಗಳನ್ನು ಹಿಂಪಡೆದು, 6 ವರ್ಷ ಪೂರ್ಣಗೊಂಡ ಮಗುವನ್ನು ಒಂದನೇ ತರಗತಿಗೆ ದಾಖಲಿಸಲು ಸರಕಾರದ ಅಧೀನ ಕಾರ್ಯದರ್ಶಿ ಹೆಚ್.ಎಸ್. ಶಿವಕುಮಾರ್ ಆದೇಶಿಸಿದ್ದಾರೆ.

error: Content is protected !! Not allowed copy content from janadhvani.com