janadhvani

Kannada Online News Paper

ಪ್ರಚೋದನಕಾರಿ ಭಾಷಣ: ಪ್ರಮೋದ್ ಮುತಾಲಿಕ್ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರವೇಶ ನಿಶೇಧ

ಮಂಗಳೂರು: ಪ್ರಚೋದನಕಾರಿ ಭಾಷಣ ಹಿನ್ನೆಲೆ ದಕ್ಷಿಣ ಜಿಲ್ಲೆಗೆ ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುತಾಲಿಕ್ ಪ್ರಚೋದನಕಾರಿ ಭಾಷಣ ಮಾಡುವ ಸಾಧ‍್ಯತೆ ಹಿನ್ನೆಲೆ ಈ ಕ್ರಮ ತೆಗೆದುಕೊಳ್ಳಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಗೆ ಇಂದಿನಿಂದ(ಜುಲೈ 28) ಮುಂದಿನ ಆದೇಶದವರೆಗೆ ಮುತಾಲಿಕ್‌ ಪ್ರವೇಶವನ್ನು ನಿಷೇಧಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ ಕೆವಿ ಆದೇಶ ಹೊರಡಿಸಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮುತಾಲಿಕ್ ದಕ್ಷಿಣ ಕನ್ನಡ ಜಿಲ್ಲೆಯ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಹೇಳಲಾಗಿದೆ.

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಕಡಬ ಮತ್ತು ಸುಳ್ಯ ತಾಲ್ಲೂಕುಗಳಿಗೆ ಮುತಾಲಿಕ್ ಪ್ರವೇಶಕ್ಕೆ ನಿಷೇಧ ವಿಧಿಸಲಾಗಿದೆ. ಮಂಗಳೂರು ನಗರ ಪೊಲೀಸ್‌ ಕಮೀಷನರೇಟ್‌ ವ್ಯಾಪ್ತಿ ಹೊರತುಪಡಿಸಿ ಜಿಲ್ಲೆಯಲ್ಲಿ ಮುತಾಲಿಕ್‍ಗೆ ಪ್ರವೇಶವಿರುವುದಿಲ್ಲ.

ಜಿಲ್ಲೆಯ ಪ್ರಸ್ತುತ ವಿದ್ಯಮಾನ ಪರಿಗಣಿಸಿ ಅಹಿತಕರ ಘಟನೆ ನಡೆಯದಂತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಮುತಾಲಿಕ್‍ಗೆ ಜುಲೈ 28ರಿಂದ ಮುಂದಿನ ಆದೇಶದವರೆಗೆ ನಿಷೇಧ ಹೇರಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.