ಮಂಗಳೂರು: ಪ್ರಚೋದನಕಾರಿ ಭಾಷಣ ಹಿನ್ನೆಲೆ ದಕ್ಷಿಣ ಜಿಲ್ಲೆಗೆ ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುತಾಲಿಕ್ ಪ್ರಚೋದನಕಾರಿ ಭಾಷಣ ಮಾಡುವ ಸಾಧ್ಯತೆ ಹಿನ್ನೆಲೆ ಈ ಕ್ರಮ ತೆಗೆದುಕೊಳ್ಳಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಗೆ ಇಂದಿನಿಂದ(ಜುಲೈ 28) ಮುಂದಿನ ಆದೇಶದವರೆಗೆ ಮುತಾಲಿಕ್ ಪ್ರವೇಶವನ್ನು ನಿಷೇಧಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ ಕೆವಿ ಆದೇಶ ಹೊರಡಿಸಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮುತಾಲಿಕ್ ದಕ್ಷಿಣ ಕನ್ನಡ ಜಿಲ್ಲೆಯ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಹೇಳಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಕಡಬ ಮತ್ತು ಸುಳ್ಯ ತಾಲ್ಲೂಕುಗಳಿಗೆ ಮುತಾಲಿಕ್ ಪ್ರವೇಶಕ್ಕೆ ನಿಷೇಧ ವಿಧಿಸಲಾಗಿದೆ. ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿ ಹೊರತುಪಡಿಸಿ ಜಿಲ್ಲೆಯಲ್ಲಿ ಮುತಾಲಿಕ್ಗೆ ಪ್ರವೇಶವಿರುವುದಿಲ್ಲ.
ಜಿಲ್ಲೆಯ ಪ್ರಸ್ತುತ ವಿದ್ಯಮಾನ ಪರಿಗಣಿಸಿ ಅಹಿತಕರ ಘಟನೆ ನಡೆಯದಂತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಮುತಾಲಿಕ್ಗೆ ಜುಲೈ 28ರಿಂದ ಮುಂದಿನ ಆದೇಶದವರೆಗೆ ನಿಷೇಧ ಹೇರಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ