ಮಂಗಳೂರು, ಜು.29: ಮತಾಂಧ ಶಕ್ತಿಗಳಿಂದ ಹತ್ಯೆಗೀಡಾದವರಿಗೆ ಸರಕಾರ ಪರಿಹಾರ ನೀಡುವುದು ತೆರಿಗೆ ದುಡ್ಡಿನಿಂದ. ಮುಖ್ಯ ಮಂತ್ರಿ ತಮ್ಮ ಕಿಸೆಯಿಂದ ನೀಡುವುದಲ್ಲ. ಹಾಗಾಗಿ ಹತ್ಯೆಗೀಡಾದವರನ್ನು ಅವರವರ ಹೆತ್ತವರ ನೋವನ್ನು ಸಮಾನವಾಗಿ ಪರಿಗಣಿಸಿ, ಪಕ್ಷಪಾತವಿಲ್ಲದೆ ಪರಿಹಾರ ನೀಡಬೇಕು ಎಂದು ವಿಧಾನಸಭಾ ವಿಪಕ್ಷ ಉಪನಾಯಕ ಯು.ಟಿ.ಖಾದರ್ ಆಗ್ರಹಿಸಿದ್ದಾರೆ.
ನಗರದಲ್ಲಿಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ನಿನ್ನೆ ಬೆಳ್ಳಾರೆಗೆ ಭೇಟಿ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಳೆದ ವಾರ ದುಷ್ಕರ್ಮಿಗಳಿಂದ ಹತ್ಯೆಯಾದ ಮಸೂದ್ ಕುಟುಂಬನ್ನೂ ಭೇಟಿಯಾಗಬೇಕಿತ್ತು. ಆದರೆ ಅವರು ಹಾಗೆ ಮಾಡಿಲ್ಲ. ಈ ನಡುವೆ ಅವರು ಇಲ್ಲಿಂದ ವಿಮಾನ ಏರುವ ವೇಳೆಗೆ ಇಲ್ಲಿ ಮತ್ತೊಂದು ಕೊಲೆಯಾಗಿದೆ ಎಂದು ಹೇಳಿದರು.
ಮಸೂದ್, ಪ್ರವೀಣ್ ನೆಟ್ಟಾರು ಹಾಗೂ ಸುರತ್ಕಲ್ ಫಾಝಿಲ್ ಹತ್ಯೆ ಪ್ರಕರಣಗಳನ್ನು ಸರಕಾರ ಗಂಭೀರವಾಗಿ ಪರಿಗಣಿಸಬೇಕು. ಈ ಬಗ್ಗೆ ಸಮರ್ಥ ತನಿಖೆ ನಡೆಸಿ ನೈಜ ಆರೋಪಿಗಳನ್ನು ಬಂಧಿಸಬೇಕು ಹಾಗೂ ಈ ಹತ್ಯೆಗಳಿಗೆ ಯಾವ ಸಂಘಟನೆಗಳು ಕುಮ್ಮಕ್ಕು ನೀಡಿದೆಯೋ ಅವುಗಳನ್ನು ಮಟ್ಟ ಹಾಕುವ ಕೆಲಸವನ್ನು ಪೊಲೀಸ್ ಇಲಾಖೆ ಹಾಗೂ ಸರಕಾರ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ