ಮಂಗಳೂರು: ಇಲ್ಲಿನ ಹೊರವಲಯದ ಸುರತ್ಕಲ್ ನಲ್ಲಿ ದುಷ್ಕರ್ಮಿಗಳಿಂದ ಹತ್ಯೆಯಾದ ಮಂಗಳಪೇಟೆಯ ಫಾಜಿಲ್ ಮನೆಗೆ ದ. ಕ. ಜಿಲ್ಲಾ ವಖ್ಫ್ ಮಂಡಳಿ ಚೆಯರ್ಮೆನ್ ಬಿ.ಎ. ಅಬ್ದುಲ್ ನಾಸಿರ್ ಲಕ್ಕಿಸ್ಟಾರ್ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.
ಇದೇ ಸಂಧರ್ಭದಲ್ಲಿ ಜಿಲ್ಲಾ ವಖ್ಫ್ ಮಂಡಳಿ ಅಧ್ಯಕ್ಷರ ಮೂಲಕ ಕರ್ನಾಟಕ ರಾಜ್ಯ ವಖ್ಫ್ ಮಂಡಳಿ ಚೆಯರ್ಮೆನ್ ಮೌಲಾನ ಎನ್. ಕೆ. ಎಂ. ಶಾಫಿ ಸ ಅದಿ ದೂರವಾಣಿ ಮೂಲಕ ಮೃತ ಫಾಝಿಲ್ ತಂದೆಯವರೊಂದಿಗೆ ಮಾತನಾಡಿ ಸಾಂತ್ವನ ಹೇಳಿದರು.
ಬೆಂಗಳೂರಿನಲ್ಲಿ ಸರಕಾರ ಮತ್ತು ವಖ್ಫ್ ಬೋರ್ಡ್ ನ ನಡುವಿನ ಅಗತ್ಯ ಕೆಲಸವಿರುವ ಕಾರಣ ಮೃತ ಫಾಝಿಲ್ ಮನೆಗೆ ಭೇಟಿ ನೀಡಲು ವಿಳಂಬವಾಗಿದ್ದು ಒಂದೆರಡು ದಿನಗಳಲ್ಲಿ ಭೇಟಿ ನೀಡಲಿದ್ದಾರೆ ಎಂದು ನಾಸಿರ್ ಲಕ್ಕಿಸ್ಟಾರ್ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಿದರು. ಅಲ್ಲದೆ ಫಾಝಿಲ್ ಕುಟುಂಬಕ್ಕೆ ಅಗತ್ಯವಾದ ಎಲ್ಲಾ ರೀತಿಯ ನೆರವು ನೀಡುವುದಾಗಿ ಇದೇ ಭರವಸೆ ನೀಡಿ ಕುಟುಂಬ ಸದಸ್ಯರಿಗೆ ಧೈರ್ಯ ತುಂಬಿದರು.
ನಿಯೋಗದಲ್ಲಿ ಕರ್ನಾಟಕ ರಾಜ್ಯ ಪ್ರದೇಶ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದ ರಾಜ್ಯ ಸಂಘಟನಾ ಕಾರ್ಯದರ್ಶಿ ಹಾರಿಸ್ ಬೈಕಂಪಾಡಿ, ಜಿಲ್ಲಾ ವಖ್ಫ್ ಸಮಿತಿಯ ಸದಸ್ಯರಾದ ಬಿ. ಕೆ. ಸಿರಾಜುದ್ದೀನ್, ಹಿದಾಯತ್, ಹಾಗೂ ಸ್ಥಳೀಯ ನಾಯಕರು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ