janadhvani

Kannada Online News Paper

ಮುಂಬರುವ ದಿನಗಳಲ್ಲಿ ಮಸೂದ್ ಹಾಗೂ ಫಾಝಿಲ್ ಮನೆಗೂ ಭೇಟಿ ನೀಡುತ್ತೇನೆ- ಸಿಎಂ ಬೊಮ್ಮಾಯಿ

ಮಂಕಿಪಾಕ್ಸ್ ಆತಂಕ ಹಿನ್ನೆಲೆಯಲ್ಲಿ ನಾಳೆ ಆರೋಗ್ಯ ಇಲಾಖೆ ಅಧಿಕಾರಿಗಳ‌ ಜೊತೆ ಸಭೆ ನಡೆಸುತ್ತೇನೆ.

ಬೆಂಗಳೂರು: ಕೊಲೆಯಾದ ಫಾಝಿಲ್ ಹಾಗೂ ಮಸೂದ್ ಮನೆಗೆ ಭೇಟಿ ಕೊಡದ ಬಗ್ಗೆ ಕಾಂಗ್ರೆಸ್ ಆರೋಪಕ್ಕೆ ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ ಅವರು, ಕೊಲೆಯಾದ ಫಾಝಿಲ್, ಮಸೂದ್ ಮನೆಗಳಿಗೆ ಬರುವಂತಹ ದಿನಗಳಲ್ಲಿ ಭೇಟಿ ಕೊಡುತ್ತೇನೆ ಎಂದರು.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ಪ್ರಗತಿಯಾಗುತ್ತಿದೆ. ಆದಷ್ಟು ಬೇಗನೇ ಕೊಲೆಗಡುಕರ ಪತ್ತೆ ಆಗುತ್ತೆ. ಇನ್ನೊಂದೆರಡು ಮೂರು ದಿನಗಳಲ್ಲಿ ಪ್ರಕರಣವನ್ನು ಎನ್ಐಎಗೆ ವರ್ಗಾವಣೆ ಮಾಡ್ತೇವೆ. ತಾಂತ್ರಿಕ ಮತ್ತು ಪೇಪರ್ ವರ್ಕ್ ನಡೀತಿದೆ. ಆದಷ್ಟು ಬೇಗ ಪ್ರಕರಣ ವರ್ಗಾವಣೆ ಮಾಡ್ತೇವೆ ಎಂದು ಸಿಎಂ ಹೇಳಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಎನ್ಐಎಗೆ ಕೇಸ್ ಬಗ್ಗೆ ಅನೌಪಚಾರಿಕವಾಗಿ ತಿಳಿಸಿದ್ದೇವೆ. ಕೆಲವು ಎನ್ಐಎ ಅಧಿಕಾರಿಗಳು ಕೇರಳ ಮತ್ತು ಮಂಗಳೂರಿನಲ್ಲಿ ಈಗಾಗಲೇ ಮಾಹಿತಿ ಪಡೆಯುತ್ತಿದ್ದಾರೆ.

ಮಳೆಹಾನಿ ಕುರಿತು ನಾಳೆ ಅಧಿಕಾರಿಗಳೊಂದಿಗೆ ಸಭೆ ನಡೆಸುತ್ತೇನೆ. ಮಳೆ ನಷ್ಟದ ಬಗ್ಗೆ ಚರ್ಚಿಸಿ, ಪರಿಹಾರದ ಬಗ್ಗೆ ಸೂಚನೆ ಕೊಡ್ತೀನಿ. ಮಂಕಿಪಾಕ್ಸ್ ಆತಂಕ ಹಿನ್ನೆಲೆಯಲ್ಲಿ ನಾಳೆ ಆರೋಗ್ಯ ಇಲಾಖೆ ಅಧಿಕಾರಿಗಳ‌ ಜೊತೆ ಸಭೆ ನಡೆಸುತ್ತೇನೆ. ಸಭೆ ನಡೆಸಿ ಕಾಯಿಲೆ ಬಗ್ಗೆ ಮಾಹಿತಿ ಪಡೆದು, ಯಾವೆಲ್ಲ ಕ್ರಮ ತೆಗೆದುಕೊಳ್ಳಬೇಕು ಅಂತ ಚರ್ಚಿಸಿ‌, ನಿರ್ಧಾರ ಮಾಡ್ತೀನಿ ಎಂದರು.