janadhvani

Kannada Online News Paper

ಬಿಹಾರ: ಬಿಜೆಪಿ ಜೊತೆಗಿನ ಮೈತ್ರಿಗೆ ಬ್ರೇಕ್-ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ

ಮತ್ತೊಮ್ಮೆ ಮಹಾಘಟಬಂಧನ್ ಮೂಲಕ ಹೊಸ ಸರ್ಕಾರ ರಚಿಸಲು ಮುಂದಾಗಿರುವ ನಿತೀಶ್ ಕುಮಾರ್
ಈ ವರದಿಯ ಧ್ವನಿಯನ್ನು ಆಲಿಸಿ

ಪಾಟ್ನಾ: ಬಿಹಾರದಲ್ಲಿ ತಲೆದೋರಿದ್ದ ರಾಜಕೀಯ ಬಿಕ್ಕಟ್ಟಿಗೆ ಬ್ರೇಕ್ ಬಿದ್ದಿದೆ. ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡುವ ಮೂಲಕ ನಿತೀಶ್ ಕುಮಾರ್ ಎನ್ ಡಿಎ ಮೈತ್ರಿಕೂಟದಿಂದ ಹೊರಬಂದಿದ್ದಾರೆ.

ಜೆಡಿಯು ಸಂಸದರು ಮತ್ತು ಶಾಸಕರ ಸಭೆಯಲ್ಲಿ ಬಿಜೆಪಿ ಜೊತೆಗಿನ ಮೈತ್ರಿಯನ್ನು ಮುರಿದುಕೊಳ್ಳಲು ಪಕ್ಷವು ಸರ್ವಾನುಮತದಿಂದ ನಿರ್ಧಾರಕ್ಕೆ ಬಂದಿದ್ದು ನಂತರ ರಾಜ್ಯಪಾಲರನ್ನು ಭೇಟಿ ಮಾಡಿದ ನಿತೀಶ್ ಕುಮಾರ್ ತಮ್ಮ ರಾಜಿನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ಇದೇ ವೇಳೆ ತಮಗೆ 160 ಶಾಸಕರ ಬೆಂಬಲವಿರುವ ಪತ್ರವನ್ನು ರಾಜ್ಯಪಾಲ ಫಾಗು ಚೌಹಾಣ್ ಅವರಿಗೆ ನೀಡಿದ್ದಾರೆ.

ಬಿಜೆಪಿ ಜೊತೆ ಮೈತ್ರಿ ಮುರಿದುಕೊಂಡಿರುವ ನಿತೀಶ್ ಕುಮಾರ್ ಮತ್ತೊಮ್ಮೆ ಮಹಾಘಟಬಂಧನ್ ಮೂಲಕ ಹೊಸ ಸರ್ಕಾರ ರಚಿಸಲು ಮುಂದಾಗಿದ್ದಾರೆ.

ರಾಜಿನಾಮೆ ಬಳಿಕ ಆರ್ ಜೆಡಿ ನಾಯಕ ತೇಜಸ್ವಿ ಯಾದವ್ ಅವರ ಮನೆಗೆ ತೆರಳಿದ ನಿತೀಶ್ ಕುಮಾರ್ ಅವರು ಆರ್ ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಪತ್ನಿ ರಾಬ್ರಿ ದೇವಿ ಅವರನ್ನು ಭೇಟಿ ಮಾಡಿದರು.

ಜಿತನ್ ರಾಮ್ ಮಾಂಝಿ ನೇತೃತ್ವದ ಹಿಂದೂಸ್ತಾನಿ ಅವಾಮ್ ಮೋರ್ಚಾ ನಿತೀಶ್ ಕುಮಾರ್ ಮತ್ತು ಮಹಾಘಟಬಂಧನ್ ಗೆ ಬೇಷರತ್ ಬೆಂಬಲ ಘೋಷಿಸಿದ್ದಾರೆ.

error: Content is protected !! Not allowed copy content from janadhvani.com