ಬಂಟ್ವಾಳ: ( ಜನಧ್ವನಿ ವಾರ್ತೆ) ಎಸ್ಸೆಸ್ಸೆಫ್ ದ.ಕ ಜಿಲ್ಲಾ ಸಮಿತಿ ವತಿಯಿಂದ ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ ವಿದ್ಯಾರ್ಥಿಗಳಿಗಾಗಿ ಹೈಸೆಮ್ ಕ್ಯಾಂಪ್ ಹಾಗೂ ಕ್ಯಾಂಪಸ್ ನ ಎಲ್ಲಾ ವಿದ್ಯಾರ್ಥಿಗಳಿಗಾಗಿ ಕ್ಯಾಂಪಸ್ ಕೊಲೊಕ್ವಿಯಂ ಕ್ಯಾಂಪ್ ಎಸ್ಸೆಸ್ಸೆಫ್ ದ.ಕ ಜಿಲ್ಲಾಧ್ಯಕ್ಷ ಕೆ.ಪಿ.ಸಿರಾಜುದ್ದೀನ್ ಸಖಾಫಿ ಕನ್ಯಾನ ರವರ ಅಧ್ಯಕ್ಷತೆಯಲ್ಲಿ ಎಪ್ರಿಲ್ 21 ಶನಿವಾರ ಬೆಳಿಗ್ಗೆ 9:00 ಗಂಟೆಗೆ ಸ್ಪರ್ಶ ಹಾಲ್ ಬಿ.ಸಿ ರೋಡ್ನಲ್ಲಿ ನಡೆಯಲಿರುವುದು.
ಬೆಳಿಗ್ಗೆ 9:00 ಗಂಟೆಗೆ ನಡೆಯುವ ಹೈಸೆಮ್ ಕ್ಯಾಂಪನ್ನು ಕರ್ನಾಟಕ ಸುನ್ನೀ ಜಂಇಯ್ಯತುಲ್ ಉಲಮಾ ಕಾರ್ಯದರ್ಶಿ ಎಸ್.ಪಿ.ಹಂಝ ಸಖಾಫಿ ಬಂಟ್ವಾಳ ಉದ್ಘಾಟಿಸಲಿದ್ದಾರೆ.ಟ್ಯಾಲೆಂಟ್ ರಿಸೆರ್ಚ್ ಪೌಂಡೇಶನ್ ಅಡ್ವೈಸರ್ ರಫೀಕ್ ಮಾಸ್ಟರ್ ಮಂಗಳೂರು ಹೈಯರ್ ಎಜ್ಯುಕೇಶನ್ ಸೆಮಿನಾರ್ ನಲ್ಲಿ ತರಗತಿಯನ್ನು ನಡೆಸಲಿರುವರು.

ಮಧ್ಯಾಹ್ನ 1:00 ಗಂಟೆಗೆ ನಡೆಯುವ ಕ್ಯಾಂಪಸ್ ಕೊಲೊಕ್ವಿಯಂ ಕ್ಯಾಂಪ್ ನಲ್ಲಿ ಎಸ್ಸೆಸ್ಸೆಫ್ ರಾಜ್ಯ ಉಪಾಧ್ಯಕ್ಷ ಸಯ್ಯದ್ ಉಮರ್ ಅಸ್ಸಖಾಫ್ ತಂಙಳ್ ಮನ್ಶರ್ ಹಾಗೂ ಎಸ್ಸೆಸ್ಸೆಫ್ ದ.ಕ ಜಿಲ್ಲಾಧ್ಯಕ್ಷ ಕೆ.ಪಿ ಸಿರಾಜುದ್ದೀನ್ ಸಖಾಫಿ ಕನ್ಯಾನ ತರಗತಿಯನ್ನು ನಡೆಸಲಿದ್ದಾರೆ.ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಫ್ ರಾಜ್ಯ ಕ್ಯಾಂಪಸ್ ಕಾರ್ಯದರ್ಶಿ ಯಾಕೂಬ್ ಮಾಸ್ಟರ್ ಕೊಳಕೇರಿ,ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಲಂದರ್ ಪದ್ಮುಂಜ,ಕೋಶಾಧಿಕಾರಿ ಅಬ್ದುಲ್ ರಝಾಕ್ ಸಖಾಫಿ ಮೊಡಂತ್ಯಾರ್, ಆಸಿಪ್ ಹಾಜಿ ಕೃಷ್ಣಾಪುರ,ಎಸ್ಸೆಸ್ಸೆಫ್ ಜಿಲ್ಲಾ ಉಪಾಧ್ಯಕ್ಷ ಅಹ್ಮದ್ ಶರೀಫ್ ಸ ಅದಿ ಕಿಲ್ಲೂರು,ಇಬ್ರಾಹಿಂ ಸಖಾಫಿ ಸೆರ್ಕಳ,ಜಿಲ್ಲಾ ಕ್ಯಾಂಪಸ್ ಚಯರ್ಮ್ಯಾನ್ ಕೆ.ಎಂ.ಎಚ್ ಝುಹ್ರಿ ಕೊಂಬಾಳಿ,ಕಾರ್ಯದರ್ಶಿಗಳಾದ ಶರೀಫ್ ನಂದಾವರ,ಸಲೀಂ ಹಾಜಿ ಬೈರಿಕಟ್ಟೆ,ಜಿಲ್ಲಾ ಹೈಸ್ಕೂಲ್ ಕನ್ವೀನರ್ ಮಹಮ್ಮದ್ ಅಲಿ ತುರ್ಕಳಿಕೆ ಹಾಗೂ ಇನ್ನಿತರ ರಾಜ್ಯ,ಜಿಲ್ಲಾ ನಾಯಕರು ಭಾಗವಹಿಸಲಿದ್ದಾರೆ ಎಂದು ಎಸ್ಸೆಸ್ಸೆಫ್ ದ.ಕ ಜಿಲ್ಲಾ ಕ್ಯಾಂಪಸ್ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮೊಂಟೆಪದವು ಪ್ರಕಟನೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ