janadhvani

Kannada Online News Paper

SYS ಕೆಮ್ಮಾಯಿ: 75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಣೆ

SYS ಕೆಮ್ಮಾಯಿ ವತಿಯಿಂದ ಭಾರತ ದ 75 ನೇ ಸ್ವಾತಂತ್ರ್ಯ ಅಮ್ರತ ಮಹೋತ್ಸವವನ್ನು ಕೆಮ್ಮಾಯಿ SYS ಕಛೇರಿ ಮುಂಭಾಗ ವಿಜ್ರಂಭಣೆಯಿಂದ ಆಚರಿಸಲಾಯಿತು.

ಕಾರ್ಯಕ್ರಮ ದ ಅಧ್ಯಕ್ಷತೆಯನ್ನು SYS ಕೆಮ್ಮಾಯಿ ಅಧ್ಯಕ್ಷ ರಾದ ಅಬ್ದುಲ್ ರಹಿಮಾನ್‌ ವಹಿಸಿದರು. SYS ಕೆಮ್ಮಾಯಿ ಕಾರ್ಯದರ್ಶಿ ಅಬ್ದುಲ್ ರಫೀಕ್ ಸಖಾಫಿ ಬಳ್ಳಾರಿ ಸ್ವಾಗತಿಸಿದರು.

ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅಧ್ಯಕ್ಷರು, ಭಾರತದ ಸ್ವಾತಂತ್ರ್ಯ ಕ್ಕಾಗಿ ಜಾತಿ ಮತ ಧರ್ಮ ಭಾಷೆ ಯ ಭೇದಭಾವ ವಿಲ್ಲದೆ ಎಲ್ಲರೂ ಒಗ್ಗಟ್ಟಾಗಿ ಹೋರಾಡಿ ಭಾರತಕ್ಕೆ ಸ್ವಾತಂತ್ರ್ಯ ತಂದು ಕೊಟ್ಟಿದ್ದಾರೆ, ಅದನ್ನು ಕಾಪಾಡಿಕೊಂಡು ಹೋಗುವುದು ಹಾಗೂ ಎಲ್ಲಾ ದುಷ್ಟ ಶಕ್ತಿಗಳ ವಿರುದ್ಧ ಒಗ್ಗಟ್ಟಾಗಿ ಹೋರಾಡಿ ಆ ಸ್ವಾತಂತ್ರ್ಯ ವನ್ನು ರಕ್ಷಿಸಬೇಕೆಂದು ಕರೆನೀಡಿದರು.

ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ರಾದ ಅಬ್ದುಲ್ ಶಕೂರ್, ಅಬ್ದುಲ್ ನಾಸಿರ್, ಅಬ್ದುಲ್ ಬಶೀರ್, ಸಂಶುದ್ದೀನ್ ಕೆಮ್ಮಾಯಿ, ಅಬ್ದುಲ್ ರಫೀಕ್ ಮುಂತಾದವರು ಉಪಸ್ಥಿತರಿದ್ದರು.
ಇಸಾಬ‌ ಕಾರ್ಯದರ್ಶಿ ಅಬ್ದುಲ್ ಅಝೀಝ್ ವಂದಿಸಿದರು.ಕೊನೆಯಲ್ಲಿ ಸಾರ್ವಜನಿಕರಿಗೆ ಸಿಹಿತಿಂಡಿ ವಿತರಿಸಲಾಯಿತು.

error: Content is protected !! Not allowed copy content from janadhvani.com