ದೇಶದ ಸ್ವಾತಂತ್ರ್ಯಅಮೃತ ಮಹೋತ್ಸವದ ಅಂಗವಾಗಿ ತ್ವಾಹಾ ಮಸ್ಜಿದ್ ಎಸ್.ಎಸ್ ರೋಡ್ ವಠಾರದಲ್ಲಿ ಅತ್ಯಂತ ವಿಜೃಂಭಣೆಯಿಂದ 75ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು.
ಹಿದಾಯತುಲ್ ಇಸ್ಲಾಂ ಮದ್ರಸಾ ಎಸ್.ಎಸ್ ರೋಡ್ ವಿದ್ಯಾರ್ಥಿಗಳು, ವಿದ್ಯಾರ್ಥಿನಿಯರು ಹಾಗೂ ನಾಡಿನ ಸರ್ವ ನಾಗರಿಕರು ಭಾಗವಹಿಸಿದ ಈ ಕಾರ್ಯಕ್ರಮದಲ್ಲಿ ತ್ವಾಹಾ ಮಸೀದಿ ಇದರ ಅಧ್ಯಕ್ಷರಾದ ಅಬ್ಬಾಸ್ ಹಾಗೂ ಇಮಾಮ್ ಮತ್ತು ಸದರ್ ಉಸ್ತಾದರಾದ ರಫೀಕ್ ಸಖಾಫಿ ಅಲ್ ಕಾಮಿಲ್ ರವರು ಧ್ವಜಾರೋಹಣ ನಡೆಸಿ ಶುಭಹಾರೈಸಿದರು.
ಶರೀಫ್ ಹನೀಫೀ ಅಲ್ ಅಶ್‌ಅರಿ ಸಂದೇಶ ಭಾಷಣ ಮಾಡಿದರು. ಅಬ್ದುಲ್ ಖಾದರ್ ರವರು ಶುಭ ಹಾರೈಸಿ, ಹಿದಾಯತುಲ್ ಇಸ್ಲಾಂ ಮದರಸ ವಿದ್ಯಾರ್ಥಿ ಫಾಝಿಲ್ ಸ್ವಾತ್ಯಂತ್ರ್ಯ ಗೀತೆಯನ್ನು ಹಾಡಿದರು. ನಂತರ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ನಡೆಸಿದ ಮದರಸ ಮಕ್ಕಳ ಸ್ಪರ್ಧಾ ಕಾರ್ಯಕ್ರಮಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಅಧ್ಯಾಪಕರಾದ ನೌಫಲ್ ಮದನಿ, ರಾಶಿದ್ ಮದನಿ, ತ್ವಾಹಾ ಮಸ್ಜಿದ್ ಇದರ ಸಮಿತಿಯವರು, ಯಂಗ್ ಮೆನ್ಸ್ ಕಾರ್ಯಕರ್ತರು ಹಾಗೂ ನಾಡಿನ ಹಲವಾರು ಜನರು ಉಪಸ್ಥಿತರಿದ್ದರು. ಕೊನೆಗೆ ನೌಫಲ್ ಮದನಿ ಉಸ್ತಾದರು ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್