ನವದೆಹಲಿ,ಆಗಸ್ಟ್.30: ಚಾಮರಾಜಪೇಟೆಯ ವಖ್ಫ್ ಅಧೀನದ ಈದ್ಗಾ ಮೈದಾನದಲ್ಲಿ 2 ದಿನಗಳ ಕಾಲ ಯಥಾಸ್ಥಿತಿ ಕಾಯ್ದುಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ಹೊರಡಿಸಿದ್ದು, ಗಣೇಶೋತ್ಸವಕ್ಕೆ ಅನುಮತಿ ನಿರಾಕರಿಸಿದೆ.
ಈದ್ಗಾ ಮೈದಾನವೆಂದು ವಕ್ಫ್ ಬೋರ್ಡ್ ಪ್ರತಿಪಾದಿಸುತ್ತಿದ್ದ ಮೈದಾನದಲ್ಲಿ ಗಣೇಶೋತ್ಸವಕ್ಕೆ ಹೈಕೋರ್ಟ್ ಅನುಮತಿ ನೀಡಿದ್ದನ್ನು ವಕ್ಫ್ ಬೋರ್ಡ್ ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸಿತ್ತು. ಪ್ರತಿಯಾಗಿ ರಾಜ್ಯ ಸರ್ಕಾರದ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದ್ದರು. ಮೈದಾನದಲ್ಲಿ ಯಾವುದೇ ಶಾಶ್ವತ ಕಟ್ಟಡ ನಿರ್ಮಾಣ ಮಾಡುವುದಿಲ್ಲ. ರಾಜ್ಯ ಸರ್ಕಾರವೇ ಕಾನೂನು ಸುವ್ಯವಸ್ಥೆಯನ್ನು ಗಮನಿಸುತ್ತದೆ. ಆದ್ದರಿಂದ ಗಣೇಶೋತ್ಸವಕ್ಕೆ ಅನುಮತಿ ನೀಡಬೆಕು ಎಂದು ತುಷಾರ್ ಮೆಹ್ತಾ ಕೋರ್ಟ್ ಗೆ ಮನವಿ ಮಾಡಿದರು.
ಆದರೆ ವಕ್ಫ್ ಬೋರ್ಡ್ ಪರ ಕಪಿಲ್ ಸಿಬಲ್, ದುಷ್ಯಂತ್ ದವೆ ಮಂಡಿಸಿದ ವಾದವನ್ನು ಪುರಸ್ಕರಿಸಿದ ಸುಪ್ರೀಂ ಕೋರ್ಟ್ ನ ತ್ರಿಸದಸ್ಯಪೀಠ, ಇನ್ನು 2 ದಿನಗಳ ಕಾಲ ಮೈದಾನದಲ್ಲಿ ಯಥಾ ಸ್ಥಿತಿ ಕಾಯ್ದುಕೊಳ್ಳಬೇಕು, ಈದ್ಗಾ ಬಿಟ್ಟು ಬೇರೆಡೆ ಗಣೇಶೋತ್ಸವ ಆಚರಿಸಲೂ ಸುಪ್ರೀಂ ಸೂಚಿಸಿದೆ. ಅಲ್ಲದೇ ಹೈಕೋರ್ಟ್ನಲ್ಲಿ ಹೊಸ ಏಕಸದಸ್ಯ ಪೀಠ ರಚಿಸಿ ಈ ವಿಚಾರಣೆ ಮುಂದುವರೆಸಿ, ಅಲ್ಲೇ ಪ್ರಕರಣ ಇತ್ಯರ್ಥಪಡಿಸುವಂತೆ ಆದೇಶಿಸಿದೆ.
ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರಿದ್ದ ದ್ವಿಸದಸ್ಯ ಪೀಠವು ಮಂಗಳವಾರ ಈ ವಿಷಯವಾಗಿ ಒಮ್ಮತಕ್ಕೆ ಬರಲು ಸಾಧ್ಯವಾಗಲಿಲ್ಲ. ನಂತರ ಮುಖ್ಯ ನ್ಯಾಯಮೂರ್ತಿ ಯು ಯು ಲಲಿತ್ ಅವರು ನ್ಯಾಯಮೂರ್ತಿಗಳಾದ ಇಂದಿರಾ ಬ್ಯಾನರ್ಜಿ, ಅಭಯ್ ಎಸ್ ಓಕಾ ಮತ್ತು ಎಂಎಂ ಸುಂದ್ರೇಶ್ ಅವರನ್ನು ಒಳಗೊಂಡ ತ್ರಿಸದಸ್ಯ ಪೀಠವನ್ನು ರಚಿಸಿದ್ದರು.
ಈ ಹಿಂದೆ ಮೈದಾನದಲ್ಲಿ ಗಣೇಶೋತ್ಸವಕ್ಕೆ ಧಾರ್ಮಿಕ, ಸಾಂಸ್ಕೃತಿಕ ಆಚರಣೆಗೆ ಅನುಮತಿ ನೀಡಬಹುದು ಎಂದು ಹೇಳಿದ್ದ ಹೈಕೋರ್ಟ್ ಆಗಸ್ಟ್ 31 ರಿಂದ ನಿರ್ದಿಷ್ಟ ಅವಧಿಗೆ ಮಾತ್ರ ಅನುಮತಿ ನೀಡಿತ್ತು.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ