ದೋಹಾ,ಸೆ.1: ಪ್ರಯಾಣ ನೀತಿಯಲ್ಲಿ ಹೊಸ ಬದಲಾವಣೆಗಳನ್ನು ಕತಾರ್ ಘೋಷಿಸಿದೆ. ಕತಾರ್ಗೆ ಆಗಮಿಸುವ ಎಲ್ಲಾ ಪ್ರಯಾಣಿಕರಿಗೆ ಕ್ವಾರಂಟೈನ್ ಅನ್ನು ಮನ್ನಾ ಮಾಡಲಾಗಿದೆ. ಹೊ ನಿರ್ಧಾರವನ್ನು ಸಾರ್ವಜನಿಕ ಆರೋಗ್ಯ ಸಚಿವಾಲಯ ಪ್ರಕಟಿಸಿದೆ. ಹೊಸ ನಿಯಮವು ಸೆಪ್ಟೆಂಬರ್ 4 ರಿಂದ ಜಾರಿಗೆ ಬರಲಿವೆ.
ಕತಾರ್ಗೆ ಆಗಮಿಸುವ ದೇಶೀಯರು ಮತ್ತು ನಿವಾಸ ವೀಸಾ ಹೊಂದಿರುವವರು ಎಂದಿನಂತೆ ಅನುಮೋದಿತ ಲ್ಯಾಬ್ ಅಥವಾ PHCC ಯಿಂದ 24 ಗಂಟೆಗಳ ಒಳಗೆ ರಾಪಿಡ್ ಟೆಸ್ಟ್ ಪರೀಕ್ಷೆಗೆ ಒಳಗಾಗಬೇಕು.
ಸಂದರ್ಶಕರು ಕತಾರ್ಗೆ ಆಗಮಿಸುವ 48-ಗಂಟೆಗಳ ಒಳಗಿನ ಕೋವಿಡ್ ಪಿಸಿಆರ್ ಪರೀಕ್ಷೆಯ ಫಲಿತಾಂಶ ಅಥವಾ 24-ಗಂಟೆಗಳ ಹಿಂದಿನ ರಾಪಿಡ್ ಆಂಟಿಜೆನ್ ಪರೀಕ್ಷೆಯ ಫಲಿತಾಂಶವನ್ನು ಪ್ರಸ್ತುತಪಡಿಸಬೇಕು.
ಕೋವಿಡ್ ಪ್ರಕರಣಗಳು ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ವಿನಾಯಿತಿಗಳನ್ನು ನೀಡಲಾಗಿದೆ. ಇದರೊಂದಿಗೆ, ಕೋವಿಡ್ ಹರಡುವಿಕೆಯ ಮಟ್ಟಕ್ಕೆ ಅನುಗುಣವಾಗಿ ದೇಶಗಳನ್ನು ವರ್ಗೀಕರಿಸುವ ವಿಧಾನವನ್ನು ಸಹ ಕತಾರ್ ಕೊನೆಗೊಳಿಸಿದೆ.
ಕಳೆದ ದಿನ ಮಾಸ್ಕ್ ಧರಿಸುವುದರಲ್ಲಿ ವಿನಾಯಿತಿ ಘೋಷಿಸಲಾಗಿದೆ.ಮಾಲ್ ಸೇರಿದಂತೆ ಮುಚ್ಚಿದ ಕೇಂದ್ರಗಳಲ್ಲಿ ಇಂದಿನಿಂದ ಮಾಸ್ಕ್ ಧರಿಸುವ ಅಗತ್ಯವಿಲ್ಲ.
















ಇನ್ನಷ್ಟು ಸುದ್ದಿಗಳು
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ