ನವದೆಹಲಿ: ಪತ್ರಕರ್ತ ಸಿದ್ದಿಕ್ ಕಾಪ್ಪನ್ ಸಲ್ಲಿಸಿದ ಜಾಮೀನು ಅರ್ಜಿಯನ್ನು ವಿರೋಧಿಸಿ ಯು.ಪಿ. ಪೊಲೀಸರು ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿದ ಅಫಿದಾವತ್ ನಲ್ಲಿ ಪ್ರಸ್ತಾಪಿಸಿರುವ ಸಮಜಾಯಿಷಿಗಳು ಅಸಂಬದ್ದವಾಗಿವೆ ಮತ್ತು ಇದು ಸುಪ್ರೀಂ ಕೋರ್ಟ್ ನ ಹಾದಿ ತಪ್ಪಿಸುವ ಪ್ರಯತ್ನವಾಗಿದೆ ಎಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಪ್ರಧಾನ ಕಾರ್ಯದರ್ಶಿ ಅನಿಸ್ ಅಹ್ಮದ್ ಅವರು ತನ್ನ ಪತ್ರಿಕಾ ಹೇಳಿಕೆ ಮೂಲಕ ಪ್ರತಿಕ್ರಿಯಿಸಿದ್ದಾರೆ. ಉತ್ತರ ಪ್ರದೇಶ ಪೊಲೀಸರ ಆರೋಪಗಳನ್ನು ಅವರು ಸಂಪೂರ್ಣವಾಗಿ ತಳ್ಳಿಹಾಕಿದ್ದಾರೆ.
“ಪ್ರಕರಣದಲ್ಲಿ ಉತ್ತರ ಪ್ರದೇಶ ಪೊಲೀಸರು ತಳೆದಿರುವ ನಿಲುವು ಅವರು ಏನೆಂಬುದನ್ನು ಬಹಿರಂಗಗೊಳಿಸಿದೆ. ಹತ್ರಾಸ್ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಕೃತ್ಯದ ಹಿನ್ನೆಲೆಯಲ್ಲಿ ಉಂಟಾದ ಜನಾಕ್ರೋಶವನ್ನು ತಣಿಸಲು ವಿಚಾರಣೆಯ ದಿಕ್ಕನ್ನೇ ಬದಲಿಸಲಾಯಿತು. ಉ.ಪ್ರ. ಎಸ್.ಟಿ.ಎಫ್. ಅಮಾಯಕ ವಿದ್ಯಾರ್ಥಿಗಳು ಮತ್ತು ಪತ್ರಕರ್ತ ಸಿದ್ದಿಕ್ ಕಪ್ಪನ್ ಅವರನ್ನು ಹರಕೆಯ ಕುರಿಗಳಾಗಿ ಹೇಗೆ ಬಳಸಿಕೊಂಡಿತು ಮತ್ತು ಅಧಿಕಾರಿಗಳು ಅದನ್ನು ನಿಭಾಯಿಸಿದ ಭಯಾನಕ ರೀತಿಯು ಈಗ ಇಡೀ ಜಗತ್ತಿಗೆ ತಿಳಿದಿದೆ ಎಂದು ಅನೀಸ್ ಅಹ್ಮದ್ ವಿವರಿಸಿದ್ದಾರೆ.
ಪಾಪ್ಯುಲರ್ ಫ್ರಂಟ್ ಒಂದು ಕಾನೂನು ಬದ್ಧ ಮತ್ತು ಪ್ರಜಾಸತ್ತಾತ್ಮಕವಾಗಿ ಕಾರ್ಯ ನಿರ್ವಹಿಸುವ ಸಂಘಟನೆಯಾಗಿದೆ. ಅದರೊಂದಿಗೆ ಬೆರೆಯುವುದು ಅಪರಾಧವಲ್ಲ. ಅಮಾಯಕರ ನ್ಯಾಯವನ್ನು ತಡೆ ಹಿಡಿಯುವ ಪ್ರಯತ್ನದ ಭಾಗವಾಗಿ ಯು.ಪಿ. ಪೊಲೀಸರು ಪಾಪ್ಯುಲರ್ ಫ್ರಂಟ್ ಅನ್ನು ಭಯೋತ್ಪಾದನೆಯ ನಂಟು ಹೊಂದಿರುವ ಸಂಘಟನೆ ಎಂದು ಬಿಂಬಿಸುತ್ತಿದ್ದಾರೆ. ಪೊಲೀಸರು ದಾಖಲಿಸಿರುವ ಪ್ರಕರಣವು ಎಷ್ಟು ಆಧಾರರಹಿತವಾಗಿದೆ ಹಾಗೂ ಯುಪಿ ಪೊಲೀಸರು ಪುರಾವೆಗಳನ್ನು ಒದಗಿಸುವಲ್ಲಿ ಎಷ್ಟು ವಿಫಲಗೊಂಡು ಹತಾಶರಾಗಿದ್ದಾರೆ ಎಂಬುದನ್ನು ಇದು ಸ್ಪಷ್ಟಪಡಿಸುತ್ತಿದೆ. ಈ ನಿರಪರಾಧಿಗಳು ಕಳೆದ ಎರಡು ವರ್ಷಗಳಿಂದ ಜೈಲಿನಲ್ಲಿ ಕೊಳೆಯುತ್ತಿರುವುದು ಯುಪಿ ಪೊಲೀಸರು ಹೆಣೆದಿರುವ ಕಟ್ಟುಕಥೆಯಲ್ಲಿ ಸ್ವಲ್ಪವಾದರೂ ಸತ್ಯವಿರುವ ಸಂಶಯಕ್ಕಲ್ಲ; ಬದಲಾಗಿ ಅವರ ಮೇಲೆ ಹೇರಲಾಗಿರುವ ಕರಾಳ ಕಾಯ್ದೆಯಿಂದಾಗಿದೆ.
ಯುಪಿ ಪೊಲೀಸರ ಸುಳ್ಳನ್ನು ಸರ್ವೋಚ್ಛ ನ್ಯಾಯಾಲಯವು ವಿಫಲಗೊಳಿಸಲಿದೆ ಹಾಗೂ ಸಿದ್ದಿಕ್ ಕಾಪ್ಪನ್ ಮತ್ತು ಹತ್ರಾಸ್ ಪ್ರಕರಣದಲ್ಲಿ ಸಿಲುಕಿಸಲಾದ ಇತರ ಅಮಾಯಕರ ಅಕ್ರಮ ಜೈಲುಶಿಕ್ಷೆಯನ್ನು ಕೊನೆಗೊಳಿಸುತ್ತದೆ ಎಂದು ಪಾಪ್ಯುಲರ್ ಫ್ರಂಟ್ ನಿರೀಕ್ಷಿಸುತ್ತದೆ ಎಂದು ಅನೀಸ್ ಅಹ್ಮದ್ ಆಶಾವಾದ ವ್ಯಕ್ತಪಡಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ