ಬಂಟ್ವಾಳ:(ಜನಧ್ವನಿ ವಾರ್ತೆ) ಕಾಶ್ಮಿರದ ಕಥುವಾ ದಲ್ಲಿ ಆಸೀಫಾ ಳ ಬರ್ಬರ ಹತ್ಯೆ ಅಮಾನವೀಯ ಕೃತ್ಯ,ಇಂತಹ ಹೇಯ ಕೃತ್ಯವನ್ನು ಮಾಡಿದ ದುಷ್ಕರ್ಮಿಗಳನ್ನು ಯಾವುದೇ ರಾಜಕೀಯ ಪ್ರೇರಣೆಗೆ ಒಳಗಾಗದೆ ಬಂಧಿಸಿ ಗಲ್ಲು ಶಿಕ್ಷೆಗೆ ಗುರಿಪಡಿಸಿ,ಮುಗ್ಧ ಮಗುವಿಗೆ ನ್ಯಾಯವನ್ನು ಒದಗಿಸಿಕೊಡಬೇಕೆಂದು ಎಸ್ಸೆಸ್ಸೆಫ್ ದ.ಕ ಜಿಲ್ಲಾಧ್ಯಕ್ಷ ಕೆ.ಪಿ.ಸಿರಾಜುದ್ದೀನ್ ಸಖಾಫಿ ರವರು ಬಿಸಿ.ರೋಡ್ ನಲ್ಲಿ ಎಸ್ಸೆಸ್ಸೆಫ್ ದ.ಕ ಜಿಲ್ಲಾ ಕ್ಯಾಂಪಸ್ ವಿಂಗ್ ನಿಂದ ನಡೆದ ಬೃಹತ್ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡುತ್ತಾ ಹೇಳಿದರು.
ಪ್ರತಿಭಟನೆಯಲ್ಲಿ ಎಸ್ಸೆಸ್ಸೆಫ್ ಜಿಲ್ಲಾ ಕೋಶಾಧಿಕಾರಿ ಅಬ್ದುಲ್ ರಝಾಕ್ ಸಖಾಫಿ ಮೊಡಂತ್ಯಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಲಂದರ್ ಪದ್ಮುಂಜ,ಜಿಲ್ಲಾ ಕ್ಯಾಂಪಸ್ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮೊಂಟೆಪದವು,ಉಪಾಧ್ಯಕ್ಷ ಇಬ್ರಾಹಿಂ ಸಖಾಫಿ ಸೆರ್ಕಳ,ಇಕ್ಬಾಲ್ ಮಂಗಳಪೇಟೆ, ಇಲ್ಯಾಸ್ ಪೊಟ್ಟೊಳಿಕೆ,ಮೌಸೂಫ್ ಅಬ್ದುಲ್ಲ,ಹಾಗೂ ಇನ್ನಿತರ ರಾಜ್ಯ,ಜಿಲ್ಲಾ ನಾಯಕರು ಉಪಸ್ಥಿತರಿದ್ದರು.ನಂತರ ಆಸೀಫಾಳಿಗೆ ನ್ಯಾಯವನ್ನು ಆಗ್ರಹಿಸಿ ಕ್ಯಾಂಪಸ್ ವಿದ್ಯಾರ್ಥಿಗಳಿಂದ ಮನವಿಯನ್ನು ಸಲ್ಲಿಸಲಾಯಿತು.
ಇಸ್ಮಾಯಿಲ್ ಮಾಸ್ಟರ್ ಸ್ವಾಗತಿಸಿ ವಂದಿಸಿದರು.