ಲಕ್ನೋ,ಸೆ.12: ಜ್ಞಾನವಾಪಿ ಮಸೀದಿಯಲ್ಲಿ (Gyanvapi Masjid) ಪ್ರತಿದಿನ ಹಿಂದೂ ದೇವತೆಗಳ ಪೂಜೆಗೆ ಅನುಮತಿ ನೀಡುವಂತೆ ಹಿಂದೂ ಆರಾಧಕರು ಮಾಡಿದ ಮನವಿಯನ್ನು ಪ್ರಶ್ನಿಸಿ ಅಂಜುಮನ್ ಸಮಿತಿ ಸಲ್ಲಿಸಿದ ಮನವಿಯನ್ನು ವಾರಣಾಸಿಯ ಜಿಲ್ಲಾ ನ್ಯಾಯಾಲಯ ಸೋಮವಾರ ತಿರಸ್ಕರಿಸಿದೆ.
ಜ್ಞಾನವಾಪಿ ಮಸೀದಿಯ ಆವರಣದಲ್ಲಿರುವ ಶೃಂಗಾರ ಗೌರಿ ಮತ್ತು ಇತರ ದೇವತೆಗಳ ಆರಾಧನೆಯ ಹಕ್ಕುಗಳನ್ನು ಕೋರಿ ಮಹಿಳಾ ಫಿರ್ಯಾದಿಗಳ ಪ್ರಕರಣ ವಿಚಾರಣೆಗೆ ಯೋಗ್ಯ ಎಂದು ಜಿಲ್ಲಾ ನ್ಯಾಯಾಧೀಶ ಅಜಯ್ ಕೃಷ್ಣ ವಿಶ್ವೇಶ ಆದೇಶಿಸಿದ್ದಾರೆ.
ಜ್ಞಾನವಾಪಿ ಶೃಂಗಾರ ಗೌರಿ ವಿವಾದ ಪ್ರಕರಣದ ತೀರ್ಪು ನೀಡುತ್ತಿರುವ ಜಿಲ್ಲಾ ನ್ಯಾಯಾಧೀಶ ಎ.ಕೆ.ವಿಶ್ವೇಶ್ ಅವರ ಏಕ ಸದಸ್ಯ ಪೀಠವು ಈ ಆದೇಶ ನೀಡಿದ್ದು ಮುಸ್ಲಿಂ ಪರವಾಗಿ ಪ್ರತಿನಿಧಿಸುವ ಅಂಜುಮನ್ ಇಂತೆಝಾಮಿಯಾ ಸಮಿತಿಯು ಅಲಹಾಬಾದ್ ಹೈಕೋರ್ಟ್ ಮೆಟ್ಟಿಲೇರುವುದಾಗಿ ಹೇಳಿದೆ. ಪ್ರಕರಣದ ಮುಂದಿನ ವಿಚಾರಣೆ ಸೆ.22 ರಂದು ನಡೆಯಲಿದೆ ಎಂದು ಹಿಂದೂ ಪರ ವಕೀಲ ವಿಷ್ಣು ಶಂಕರ್ ಜೈನ್ ಹೇಳಿದ್ದಾರೆ.
ಕೋಮು ಸೂಕ್ಷ್ಮ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ನ್ಯಾಯಾಧೀಶರು ಕಳೆದ ತಿಂಗಳು ಆದೇಶವನ್ನು ಸೆಪ್ಟೆಂಬರ್ 12 ರವರೆಗೆ ಕಾಯ್ದಿರಿಸಿದ್ದರು.
ತೀರ್ಪಿನ ಹಿನ್ನೆಲೆಯಲ್ಲಿ ವಾರಣಾಸಿಯಲ್ಲಿ ಪೊಲೀಸ್ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ವಾರಣಾಸಿ ಪೊಲೀಸ್ ಕಮಿಶನರೇಟ್ ವಲಯದಲ್ಲಿ ನಿಷೇಧಾಜ್ಞೆ ಹೇರಿರುವುದಾಗಿ ಬನಾರಸ್ ಪೋಲೀಸು ಕಮಿಶನರ್ ಎ. ಸತೀಶ್ ಗಣೇಶ್ ತಿಳಿಸಿದ್ದಾರೆ.ಧಾರ್ಮಿಕ ನಾಯಕರು ಪರಸ್ಪರ ಸಂವಾದ ಸಂವಹನದ ಮೂಲಕ ಉದ್ವಿಗ್ನತೆಗೆ ಅವಕಾಶ ನೀಡದಂತೆ ನೋಡಿಕೊಳ್ಳಬೇಕು ಎಂದೂ ಪೊಲೀಸ್ ಕಮಿಶನರ್ ಮನವಿ ಮಾಡಿದ್ದಾರೆ.
ನಗರವನ್ನು ಹಂತಗಳಾಗಿ ವಿಭಾಗ ಮಾಡಿ ಆಯಾ ವಿಭಾಗಗಳನ್ನು ನೋಡಿಕೊಳ್ಳಲು ಪೋಲೀಸು ತುಕಡಿಗಳನ್ನು ನಿಶ್ಚಿತಗೊಳಿಸಿ ಬಿಡಲಾಗಿದೆ. ನಗರ ಮತ್ತು ಜಿಲ್ಲೆಯ ಗಡಿ ಪ್ರದೇಶ, ನಗರದ ಹೋಟೆಲು ಮತ್ತು ಅತಿಥಿ ಗೃಹಗಳ ಮೇಲೆ ಕಣ್ಣಿಡಲು ಸಹ ಪೋಲೀಸರನ್ನು ನಿಯೋಜಿಸಲಾಗಿದೆ ಎಂದು ಕಮಿಶನರ್ ಹೇಳಿದರು.
ಕಳೆದ ತಿಂಗಳು ಕೋರ್ಟು ಮುಸ್ಲಿಂ ಮತ್ತು ಹಿಂದೂ ಎರಡೂ ಕಡೆಯ ವಾದಗಳನ್ನು ಆಲಿಸಿ ಅದನ್ನು ದಾಖಲಿಸಿಕೊಂಡಿತ್ತು. ಇಂದು ತೀರ್ಪು ಪ್ರಕಟಿಸಲಾಗಿದೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ