ಕುವೈತ್ ಸಿಟಿ: ನಕಲಿ ಕಂಪನಿಗಳ ಹೆಸರಿನಲ್ಲಿ ವೀಸಾ ವ್ಯಾಪಾರ ನಡೆಸುವವರ ವಿರುದ್ಧ ಕುವೈತ್ (Kuwait) ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಿದೆ. ಕಳೆದ ದಿನ ಅಬ್ಬಾಸಿಯಾ ಪ್ರದೇಶದಲ್ಲಿ ನಡೆದ ಅಭಿಯಾನದಲ್ಲಿ ಮಾನವಶಕ್ತಿ ಮತ್ತು ಗೃಹ ಸಚಿವಾಲಯದ ಸಾರ್ವಜನಿಕ ಪ್ರಾಧಿಕಾರದ ಅಧಿಕಾರಿಗಳು ಭಾಗವಹಿಸಿದ್ದರು.
ತಪಾಸಣೆ ವೇಳೆ ಸುಮಾರು 80 ನಕಲಿ ಕಂಪನಿಗಳು ಅಕ್ರಮ ನಡೆಸುತ್ತಿರುವ ಬಗ್ಗೆ ಉನ್ನತ ಅಧಿಕಾರಿಗಳಿಗೆ ವರದಿ ಸಲ್ಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೇಶದಲ್ಲಿ ಅಗತ್ಯಕ್ಕಿಂತ ಹೆಚ್ಚು ಕಾರ್ಮಿಕರಿಲ್ಲದಂತೆ ಮತ್ತು ಶಾಡೋ(Shado) ಕಂಪನಿಗಳ ಹೆಸರಿನಲ್ಲಿ ವೀಸಾ ನೀಡುವುದನ್ನು ತಪ್ಪಿಸಲು ಸಾರ್ವಜನಿಕ ಪ್ರಾಧಿಕಾರವು ಹಲವು ಕ್ರಮಗಳನ್ನು ಕೈಗೊಂಡಿದೆ.
ಶಂಕಿತ ಕಂಪನಿಗಳ ಹೆಚ್ಚಿನ ವಿವರಗಳನ್ನು ವಾಣಿಜ್ಯ ಸಚಿವಾಲಯದ ಸಹಯೋಗದೊಂದಿಗೆ ಪರಿಶೀಲಿಸಲಾಗುತ್ತದೆ. ನಕಲಿ ವಹಿವಾಟು ಪತ್ತೆಯಾದರೆ ಕಂಪನಿಗಳ ಕಡತಗಳನ್ನು ಸ್ಥಗಿತಗೊಳಿಸಲಾಗುವುದು ಮತ್ತು ಗೃಹ ಸಚಿವಾಲಯದ ಸಹಕಾರದೊಂದಿಗೆ ಸಂಸ್ಥೆಗಳಿಗೆ ಸಂಬಂಧಿಸಿದ ಕಾರ್ಮಿಕರ ನಿವಾಸದ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮಾನವಶಕ್ತಿ ಸಾರ್ವಜನಿಕ ಪ್ರಾಧಿಕಾರದ(Public Authority Of Manpower) ಅಧಿಕಾರಿಗಳು ತಿಳಿಸಿದ್ದಾರೆ.
ಮಾನವ ಕಳ್ಳಸಾಗಣೆ ಮತ್ತು ಅಕ್ರಮ ವೀಸಾ ವ್ಯಾಪಾರವನ್ನು ತಡೆಗಟ್ಟುವ ಭಾಗವಾಗಿ, ಅಧಿಕಾರಿಗಳು ದೇಶದ ಉದ್ಯೋಗ ಸಂಸ್ಥೆಗಳಲ್ಲಿ ತಪಾಸಣೆಯನ್ನು ವ್ಯಾಪಕಗೊಳಿಸಿದ್ದಾರೆ ಮತ್ತು ನೇಮಕಗೊಂಡ ಉದ್ಯೋಗಿಗಳು ಕಂಪನಿ ಮತ್ತು ಕೆಲಸದ ಸ್ಥಳದಲ್ಲಿ ಇದ್ದಾರೆಯೇ ಎಂದು ಪರಿಶೀಲಿಸಲಾಗುವುದು ಎಂದು ಹೇಳಿದರು.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ