ದೆಹಲಿ: ಅವಿವಾಹಿತ ಮಹಿಳೆಯರಿಗೂ ಗರ್ಭಪಾತ(Abortion) ಮಾಡಿಕೊಳ್ಳಲು ಸುಪ್ರೀಂ ಕೋರ್ಟ್(Supreme Court) ಅನುಮತಿ ನೀಡಿದೆ. ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠದಿಂದ ಈ ಆದೇಶ ಹೊರಬಿದ್ದಿದೆ.
ಪ್ರತಿಯೊಬ್ಬ ಮಹಿಳೆಗೆ ಕಾನೂನುಬದ್ಧ ಗರ್ಭಪಾತ ಮಾಡುವ ಹಕ್ಕಿದೆ. ಪತ್ನಿಯ ಒಪ್ಪಿಗೆಯಿಲ್ಲದೆ ಪತಿ ಲೈಂಗಿಕ ಕ್ರಿಯೆ ನಡೆಸುವುದನ್ನೂ ಅತ್ಯಾಚಾರ ಎಂದು ಪರಿಗಣಿಸಲಾಗುವುದು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.
24 ವಾರಗಳಿಗಿಂತ ಕಡಿಮೆ ವಯಸ್ಸಿನ ಗರ್ಭಧಾರಣೆಯನ್ನು ಅಂತ್ಯಗೊಳಿಸಲು ವಿವಾಹಿತ ಮತ್ತು ಅವಿವಾಹಿತ ಮಹಿಳೆಯರಿಗೆ ಸಮಾನ ಹಕ್ಕು ಇದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ವೈದ್ಯಕೀಯ ಪ್ರೆಗ್ನೆನ್ಸಿ ಆಕ್ಟ್ ಪ್ರಕಾರ ವಿವಾಹಿತ ಮಹಿಳೆಯರಿಗೆ ಮಾತ್ರ ಗರ್ಭಪಾತಕ್ಕೆ ಅವಕಾಶವಿದೆ. ವಿಕಲಾಂಗ ಮಹಿಳೆಯರಿಗೆ ಮತ್ತು ಅತ್ಯಾಚಾರದಿಂದ ಬದುಕುಳಿದವರಿಗೆ ವಿಶೇಷ ಅನುಮತಿಯೊಂದಿಗೆ ಗರ್ಭಪಾತವನ್ನು ಅನುಮತಿಸಲಾಗಿತ್ತು. ಆದರೆ ಮಹಿಳೆಯರಿಗೆ ಗರ್ಭಪಾತ ಮಾಡುವ ಹಕ್ಕಿದೆ ಮತ್ತು ವಿವಾಹಿತ ಮತ್ತು ಅವಿವಾಹಿತರ ನಡುವಿನ ವ್ಯತ್ಯಾಸವು ಅಸಾಂವಿಧಾನಿಕ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಅಂತರಾಷ್ಟ್ರೀಯ ಗರ್ಭಪಾತ ದಿನದಂದೇ ಮಹಿಳೆಯರಿಗೆ ತಮ್ಮ ಶಾರೀರಿಕ ಹಕ್ಕನ್ನು ನೀಡುವ ಮಹತ್ವದ ತೀರ್ಪು ಹೊರಬಿದ್ದಿರುವುದು ಮತ್ತೊಂದು ವಿಶೇಷ.ಇದೇ ವೇಳೆ, ಪತ್ನಿಯ ಒಪ್ಪಿಗೆಯಿಲ್ಲದೆ ಪತಿ ನಡೆಸುವ ಲೈಂಗಿಕ ಕ್ರಿಯೆ ಕೂಡ ಅಪರಾಧ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಲಿವಿಂಗ್ ಟುಗೆದರ್ ರಿಲೇಶನ್ ಶಿಪ್ ನಿಂದ ಗರ್ಭಿಣಿಯಾಗಿದ್ದ 25 ವರ್ಷದ ಮಹಿಳೆಯೊಬ್ಬರು ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದನ್ನು ಆಧರಿಸಿದ ಪ್ರಕರಣ ಇದಾಗಿದೆ. ಅವಿವಾಹಿತ ಮಹಿಳೆಗೆ ಗರ್ಭಪಾತಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ ಎಂದು ದೆಹಲಿ ಹೈಕೋರ್ಟ್ ಅನುಮತಿ ನಿರಾಕರಿಸಿತ್ತು. ಈ ಪ್ರಕರಣದ ಮೇಲ್ಮನವಿಯಲ್ಲಿ, ಸುಪ್ರೀಂ ಕೋರ್ಟ್ ಗರ್ಭಪಾತಕ್ಕೆ ಅವಕಾಶ ಮಾಡಿಕೊಟ್ಟಿದೆ, ಆದರೆ ಅವಿವಾಹಿತರಿಗೆ ಅನುಮತಿ ನಿರಾಕರಣೆಯನ್ನು ನಿರ್ದಿಷ್ಟವಾಗಿ ಪರಿಗಣಿಸಿ ಮಹತ್ವದ ತೀರ್ಪು ಬಂದಿದೆ.
















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)