ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(KSRTC) ಹಾಗೂ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ ವತಿಯಿಂದ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಉಚಿತ ಕೆ.ಎಸ್.ಆರ್.ಟಿ.ಸಿ. ಪಾಸ್ ಸೌಲಭ್ಯವನ್ನು ನೀಡಲಾಗುತ್ತಿದೆ. ಇಡಿಸಿಎಸ್ (EDCS) ಇಲಾಖೆಯ ಸೇವಾ ಸಿಂಧು(sevasindhu) ಪೋರ್ಟಲ್ ರವರ ಗ್ರಾಮ ಒನ್ (gramaone) ಸೇವಾ ಮತ್ತು ಕರ್ನಾಟಕ ಒನ್(karnatakaone) ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸುವಂತೆ ಕೆ.ಎಸ್.ಆರ್.ಟಿ.ಸಿ. ವಿಭಾಗೀಯ ನಿಯಂತ್ರಣಾಧಿಕಾರಿಗಳು ತಿಳಿಸಿದ್ದಾರೆ.
ಪಾಸ್ ಪಡೆಯಲು ಯಾವುದೇ ಶುಲ್ಕ ಇರುವುದಿಲ್ಲ. ಅರ್ಜಿಯೊಂದಿಗೆ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಪಡೆದ ಗುರುತಿನ ಚೀಟಿ, ಆಧಾರ್ ಕಾರ್ಡ್ ಸಲ್ಲಿಸಿ ಅಲ್ಲಿಯೇ ಸ್ಮಾರ್ಟ್ ಕಾರ್ಡ್ ಮಾದರಿಯ ಬಸ್ಪಾಸ್ಗಳನ್ನು ಪಡೆದುಕೊಳ್ಳಬಹುದು.
ಬಸ್ ಪಾಸ್ಗಾಗಿ ಅರ್ಜಿ ಸಲ್ಲಿಸುವ ಕಾರ್ಮಿಕರು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಣಿಯಾಗಿರಬೇಕು ಹಾಗೂ ನೋಂದಣಿ ಚಾಲ್ತಿಯಲ್ಲಿರಬೇಕು. ಪಾಸುದಾರರು ನಗರ, ಸಾಮಾನ್ಯ/ಹೊರವಲಯ ಹಾಗೂ ವೇಗದೂತ ಬಸ್ಸುಗಳಲ್ಲಿ, ಪಾಸಿನಲ್ಲಿ ನಮೂದಿಸಲಾದ ಪ್ರಾರಂಭಿಕ ಸ್ಥಳ/ಪ್ರಾರಂಭಿಕ ಬಸ್ ನಿಲ್ದಾಣದಿಂದ 07 ಹಂತಗಳವರೆಗೆ (ಗರಿಷ್ಟ 45 ಕಿ.ಮೀ) ನಿಗಮದ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶವಿರುತ್ತದೆ.
ಬಸ್ ಪಾಸ್ನ ಮಾನ್ಯತಾ ಅವಧಿಯು ಮೂರು ತಿಂಗಳಾಗಿರುತ್ತದೆ. ಮೂರು ತಿಂಗಳ ಬಸ್ ಪಾಸ್ ಮಾನ್ಯತಾ ಅವಧಿ ಮುಕ್ತಾಯವಾಗುವ ಕೊನೆಯ ದಿನಾಂಕಕ್ಕಿಂತ 15 ದಿನಗಳ ಮೊದಲು ಮರು ಅವಧಿಗೆ ಹೊಸದಾಗಿ ಅರ್ಜಿ ಸಲ್ಲಿಸಿ, ಸೇವಾ ಸಿಂಧು ಪೋರ್ಟಲ್ ಮೂಲಕ ಬಸ್ ಪಾಸ್ ಪಡೆಯಲು ಅವಕಾಶ ಕಲ್ಪಿಸಲಾಗಿರುತ್ತದೆ. ಈ ಸಂದರ್ಭದಲ್ಲಿ ವಿಳಾಸವನ್ನು ಬದಲಾಯಿಸಿಕೊಳ್ಳಲು ಅವಕಾಶವನ್ನು ಕಲ್ಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ