ಅಬುಧಾಬಿ: ಕರ್ನಾಟಕ ಕಲ್ಚರಲ್ ಫೌಂಡೇಷನ್ (ಕೆಸಿಎಫ್) ಅಬುಧಾಬಿ ವತಿಯಿಂದ ಬೃಹತ್ ಮೀಲಾದ್ ಸಮಾವೇಶಕ್ಕೆ ಭರದ ಸಿದ್ದತೆ ನಡೆಸಲಾಗಿದೆ.
ಕರ್ನಾಟಕ ಕಲ್ಚರಲ್ ಫೌಂಡೇಶನ್ ವತಿಯಿಂದ ಅಬುಧಾಬಿಯ ಇಂಡಿಯನ್ ಇಸ್ಲಾಮಿಕ್ ಸೆಂಟರ್ ನಲ್ಲಿ, ಅಕ್ಟೋಬರ್ 16 ರಂದು ನಡೆಯುವ ಮೀಲಾದ್ ಸಮಾವೇಶಕ್ಕೆ ಯುಎಇಯ ವಿವಿದ ಭಾಗಗಳಿಂದ ಸುಮಾರು 1500 ರಷ್ಟು ವಿಶ್ವಾಸಿಗಳು ಭಾಗವಹಿಸಲಿದ್ದಾರೆ.
ಕಾರ್ಯಕ್ರಮದ ಭಾಗವಾಗಿ ಮೌಲಿದ್ ಪಾರಯಣ, ಖವಾಲಿ, ಬುರ್ದ ಆಲಾಪಣೆ ಹಾಗು ಯುವ ವಾಗ್ಮಿ ಅನಸ್ ಅಮಾನಿ ಪುಷ್ಪಗಿರಿಯವರ ಪ್ರವಚಣ ನಡೆಯಲಿದೆ.ಪ್ರಸ್ತುತ ಕಾರ್ಯಕ್ರಮವು ಸಂಜೆ ಆರು ಗಂಟೆಗೆ ಆರಂಬಗೊಳ್ಳಲಿದೆ. ಕಾರ್ಯಕ್ರಮದ
ಕೊನೆಯಲ್ಲಿ ತಬರ್ರುಕ್ ವಿತರಿಸಲಾಗುವುದು ಎಂದು ಸಂಘಟಕರು ತಿಳಿಸಿದ್ದು, ಮಹಿಳೆಯರಿಗೆ
ಪ್ರತ್ಯೇಕ ಆಸನ ವ್ಯವಸ್ತೆ ಕಲ್ಪಿಸಲಾಗಿದೆ.

ಅನಿವಾಸಿ ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಂಘಟಕರು ಕರೆ ನೀಡಿದ್ದಾರೆ.
ಈ ಕುರಿತು ನಡೆದ ಪತ್ರಿಕಾಗೋಷ್ಠಿಯಲ್ಲಿ ಮೀಲಾದ್ ಸಮಿತಿ ಅಧ್ಯಕ್ಷ ಇಂಜಿನಿಯರ್ ಮನ್ಸೂರ್ ಚಿಕ್ಕಮಗಳೂರು, ಕೆಸಿಎಫ್ ಅಬುಧಾಬಿ ಅದ್ಯಕ್ಷ ಹಸೈನಾರ್ ಅಮಾನಿ, ಕಾರ್ಯದರ್ಶಿ ಕಬೀರ್ ಬಾಯಂಬಾಡಿ ಹಾಗೂ ಕೆಸಿಎಫ್ ರಾಷ್ಟ್ರೀಯ ಸಮಿತಿಯ ಹಕೀಂ ತುರ್ಕಲಿಕೆ ಹಾಜರಿದ್ದು ಮಾಹಿತಿ ನೀಡಿದರು.
















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು