janadhvani

Kannada Online News Paper

ಸೌದಿ ಯುವರಾಜ, ಪ್ರಧಾನಿ ಮುಹಮ್ಮದ್ ಬಿನ್ ಸಲ್ಮಾನ್ ಭಾರತ ಭೇಟಿ ರದ್ದು

ಇಂಡೋನೇಷ್ಯಾದ ಬಾಲಿಯಲ್ಲಿ ನಡೆಯುವ ಜಿ-20 ಶೃಂಗಸಭೆಯಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದಾರೆ

ರಿಯಾದ್: ಸೌದಿ ಯುವರಾಜ (Crown Prince) ಮತ್ತು ಪ್ರಧಾನಿ ಮುಹಮ್ಮದ್ ಬಿನ್ ಸಲ್ಮಾನ್ ಅವರು ತಮ್ಮ ಭಾರತ ಭೇಟಿಯನ್ನು ರದ್ದುಗೊಳಿಸಿದ್ದಾರೆ.

ಜಿ-20 ಶೃಂಗಸಭೆಯಲ್ಲಿ(G-20 Summit) ಪಾಲ್ಗೊಳ್ಳಲು ಇಂಡೋನೇಷ್ಯಾಕ್ಕೆ ತೆರಳುವ ಸಂದರ್ಭದಲ್ಲಿ ಅವರು ಇಂದು ಭಾರತಕ್ಕೆ ಭೇಟಿನೀಡುವುದಾಗಿ ಮೊದಲು ಘೋಷಿಸಲಾಗಿತ್ತು.ಆದರೆ ಕೊನೆಯ ಕ್ಷಣದಲ್ಲಿ ಭಾರತ ಭೇಟಿಯನ್ನು ರದ್ದುಗೊಳಿಸಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ನಾಳೆ ಇಂಡೋನೇಷ್ಯಾದ ಬಾಲಿಯಲ್ಲಿ ಆರಂಭವಾಗಲಿರುವ ಜಿ-20 ಶೃಂಗಸಭೆಯಲ್ಲಿ ಯುವರಾಜ ಮುಹಮ್ಮದ್ ಬಿನ್ ಸಲ್ಮಾನ್ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದಾರೆ ಎಂದು ಸಹ ಸೂಚಿಸಲಾಗಿದೆ.

error: Content is protected !! Not allowed copy content from janadhvani.com