ಪುತ್ತೂರು-ಕುಂಬ್ರ ಮರ್ಕಝುಲ್ ಹುದಾ ಮಹಿಳಾ ಕಾಲೇಜಿನ ಅಭಿವೃದ್ಧಿಗಾಗಿ ಕಾರ್ಯಾಚರಿಸುವ ವಿವಿಧ ಗಲ್ಫ್ ಘಟಕಗಳನ್ನು ಸಮನ್ವಯಗೊಳಿಸುವ ನಿಟ್ಟಿನಲ್ಲಿ ‘ಮರ್ಕಝುಲ್ ಹುದಾ ಗಲ್ಫ್ ಕೌನ್ಸಿಲ್’ ಕೋ ಆರ್ಡಿನೇಟರ್ ಆಗಿ ಬಶೀರ್ ಇಂದ್ರಾಜೆ ಅವರನ್ನು ನೇಮಕಮಾಡಲಾಗಿದೆ.
ಸುದೀರ್ಘ ಕಾಲ ಸಂಸ್ಥೆಯ ಸೌದಿ ಅರೇಬಿಯಾ ರಾಷ್ಟ್ರೀಯ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿ ಕಾಲೇಜಿನ ಅನೇಕ ಅಭಿವೃದ್ಧಿ ಕಾರ್ಯಗಳಿಗೆ ನೇತೃತ್ವ ನೀಡಿದ ಬಶೀರ್, ಊರಿನಲ್ಲಿಯೂ ಸಂಸ್ಥೆಯ ವಿವಿಧ ಅಭಿವೃದ್ಧಿ ಕಾರ್ಯಗಳಲ್ಲಿ ದುಡಿದ ಅನುಭವ ಹೊಂದಿದ್ದಾರೆ.
ಸೌದಿ ಅರೇಬಿಯಾ, ಯುಎಇ,ಬಹರೈನ್, ಒಮಾನ್,ಖತರ್, ಕುವೈತ್ ಮುಂತಾದ ರಾಷ್ಟ್ರಗಳ ಮರ್ಕಝುಲ್ ಹುದಾ ಪೋಷಕ ಘಟಕಗಳ ಪ್ರತಿನಿಧಿಗಳೊಂದಿಗೆ ಸಮಾಲೋಚನೆ ನಡೆಸಿದ ಬಳಿಕ, ಜುಬೈಲ್‌ನಲ್ಲಿ ನಡೆದ ಸೌದಿ ಅರೇಬಿಯಾ ರಾಷ್ಟ್ರೀಯ ಸಮಿತಿಯ ಸಮಾವೇಶದಲ್ಲಿ,ಕೇಂದ್ರ ಸಮಿತಿಯ ಉಪಾಧ್ಯಕ್ಷ ಡಾ. ಎಮ್ಮೆಸ್ಸೆಂ ಝೈನೀ ಕಾಮಿಲ್ ಈ ಆಯ್ಕೆಯನ್ನು ಘೋಷಿಸಿದರು.
ಬಶೀರ್ ಇಂದ್ರಾಜೆ ಅವರು ಮುಂದಿನ ದಿನಗಳಲ್ಲಿ ವಿವಿಧ ಅನಿವಾಸಿ ಘಟಕಗಳನ್ನು ಸಕ್ರಿಯಗೊಳಿಸುವ ಮತ್ತು ಅಲ್ಲಿನ ಕಾರ್ಯಯೋಜನೆಗಳನ್ನು ಸಿಧ್ದಪಡಿಸುವ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗಲಿದ್ದು ಸದ್ಯ ಬಹರೈನ್ ಪ್ರವಾಸಲ್ಲಿದ್ದಾರೆ.ಎಲ್ಲ ಅನಿವಾಸಿ ಘಟಕಗಳು ಅವರೊಂದಿಗೆ ಸಂಪೂರ್ಣವಾಗಿ ಸಹಕರಿಸಬೇಕೆಂದು ‘ಮರ್ಕಝುಲ್ ಹುದಾ ಗಲ್ಫ್ ಕೌನ್ಸಿಲ್’ ವಿನಂತಿಸಿದೆ.
















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ