ಸೌದಿ ಅರೇಬಿಯಾ : ರಿಯಾದ್ ನಲ್ಲಿ ಕಳೆದ ಎರಡು ವಾರದ ಹಿಂದೆ ಮೃತಪಟ್ಟ ಸಕಲೇಶಪುರ ನಿವಾಸಿ ಅಯ್ಯೂಬ್ ಖಾನ್ ರವರ ಅಂತ್ಯಕ್ರಿಯೆಯು ಡಿಸೆಂಬರ್ 4 ಆದಿತ್ಯವಾರದಂದು ನಸೀಮಿನ ಖಬರ್ ಸ್ಥಾನದಲ್ಲಿ ಕುಟುಂಬಸ್ಥರು, ಸ್ನೇಹಿತರು ಮತ್ತು ಕೆಸಿಎಫ್ ಸದಸ್ಯರ ಸಮ್ಮುಖದಲ್ಲಿ ನಡೆಯಿತು.
ಮೃತರ ಅಂತ್ಯಸಂಸ್ಕಾರಕ್ಕೆ ಬೇಕಾದ ಎಲ್ಲಾ ದಾಖಲೆ ಪತ್ರಗಳು, ರಾಯಭಾರಿ ಕಛೇರಿಗೆ ಬೇಕಾದ ಕಡತಗಳು ಹಾಗೂ ಇನ್ನಿತರ ಎಲ್ಲಾ ವ್ಯವಸ್ಥೆಗಳನ್ನು ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆಸಿಎಫ್) ರಿಯಾದ್ ನಾಯಕರ ನೇತೃತ್ವದಲ್ಲಿ ಸರಿಪಡಿಸಿದ್ದರು.
ಈ ಪುಣ್ಯ ಕಾರ್ಯದಲ್ಲಿ ಕೈ ಜೋಡಿಸಿ ಸಹಕರಿಸಿದ ರಿಯಾದ್ ಝೋನ್ ಸಾಂತ್ವನ ಇಲಾಖೆ ಅಧ್ಯಕ್ಷರಾದ ಮಜೀದ್ ವಿಟ್ಲ, ಕಾರ್ಯದರ್ಶಿ ಅಶ್ರಫ್ ಕೆಎಮ್ಮೆಸ್, ದಮ್ಮಾಮ್ ಸಾಂತ್ವನ ಇಲಾಖೆ ಅಧ್ಯಕ್ಷರಾದ ಬಾಷಾ ಗಂಗಾವಳಿ, ಇಬ್ರಾಹಿಂ ಬಾಯ್ ಹಾಗೂ ಕೆಸಿಎಫ್ ನೇತಾರರಾದ ಫಾರೂಕ್ ಪಾಣೆಮಂಗಳೂರು, ಸಿದ್ದೀಕ್ ಮದನಿ, ಶಿಹಾಬುದ್ದೀನ್ ಹಳೆಯಂಗಡಿ, ಅಝೀಝ್ ಮೂಡಿಗೆರೆ ಮತ್ತು ಸಹಕರಿಸಿದ ಕುಟುಂಬಸ್ಥರು, ಸ್ನೇಹಿತರು ಎಲ್ಲರಿಗೂ ಕೆಸಿಎಫ್ ರಿಯಾದ್ ಝೋನ್ ಸಾಂತ್ವನ ಇಲಾಖೆಯು ಎಲ್ಲಾ ವಿಧದ ಕೃತಜ್ಞತೆ ಸಲ್ಲಿಸಿರುವುದಾಗಿ ಈ ಮೂಲಕ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮೃತರು ಪತ್ನಿ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ