janadhvani

Kannada Online News Paper

ಜಲೀಲ್ ಹತ್ಯೆ: ಆರೋಪಿಗಳ ಶೀಘ್ರ ಪತ್ತೆ ಮತ್ತು ಕುಟುಂಬಕ್ಕೆ ಪರಿಹಾರ ನೀಡುವಂತೆ ಕರ್ನಾಟಕ ಮುಸ್ಲಿಮ್ ಜಮಾಅತ್ ಒತ್ತಾಯ

ಸುರತ್ಕಲ್ ನಲ್ಲಿ ದುಷ್ಕರ್ಮಿಗಳು ದಿನಸಿ ಅಂಗಡಿ ವ್ಯಾಪಾರಸ್ಥ ಜಲೀಲ್ ಎಂಬವರ ಹತ್ಯೆ ಮಾಡಿರುವುದನ್ನು ಕರ್ನಾಟಕ ಮುಸ್ಲಿಮ್ ಜಮಾಅತ್(Karnataka Muslim Jama ath) ತೀವ್ರವಾಗಿ ಖಂಡಿಸಿದೆ.

ಚುನಾವಣೆ ಹತ್ತಿರವಾಗುತ್ತಿದ್ದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾಜಕೀಯ ಕೊಲೆಗಳು, ಕೋಮು ಗಲಭೆ, ನೈತಿಕ ಪೊಲೀಸ್ ಗಿರಿಯಂತಹ ಪ್ರಕರಣಗಳು ಹೆಚ್ಚಾಗುತ್ತಿವೆ. ಅಲ್ಪಸಂಖ್ಯಾತ ಸಮುದಾಯದ ಮುಖ್ಯವಾಗಿ ಮುಸ್ಲಿಮ್ ಸಮುದಾಯದ ವ್ಯಕ್ತಿಗಳನ್ನು ಗುರಿಯಾಗಿಸಿ ನೈತಿಕ ಪೊಲೀಸ್ ಗಿರಿ, ಹಲ್ಲೆಯಂತಹ ಪ್ರಕರಣಗಳು ಅವ್ಯಾಹತವಾಗಿ ನಡೆಯುತ್ತಿದ್ದರೂ ಪೊಲೀಸರು ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲರಾಗಿರುವುದೇ ಇಂದು ಜಲೀಲ್ ರಂತಹವರ ಕೊಲೆಗೆ ಕಾರಣವಾಗಿದೆ.

ರಾಜ್ಯ ಸರಕಾರ ಕೂಡಲೇ ಕರಾವಳಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಭದ್ರಪಡಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಜಲೀಲ್ ಕೊಲೆ ಆರೋಪಿಗಳನ್ನು ತಕ್ಷಣವೇ ಬಂಧಿಸಿ, ಕಠಿಣ ಕ್ರಮಕೈಗೊಳ್ಳುವುದರ ಜೊತೆಗೆ ಅವರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕೆಂದು ಕರ್ನಾಟಕ ಮುಸ್ಲಿಂ ಜಮಾಅತ್ ಕಾರ್ಯದರ್ಶಿ ಅಬ್ದುಲ್ ಹಮೀದ್ ಬಜ್ಪೆ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

error: Content is protected !! Not allowed copy content from janadhvani.com