janadhvani

Kannada Online News Paper

ಜಲೀಲ್ ಹತ್ಯೆ: ಮುನ್ನೆಚ್ಚರಿಕೆ ಕ್ರಮವಾಗಿ ನಾಲ್ಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ

ಇದು,ಕ್ರಿಸ್ಮಸ್ ಆಚರಣೆ, ಧಾರ್ಮಿಕ ಕಾರ್ಯಕ್ರಮ ಮತ್ತು ಅಗತ್ಯ ತುರ್ತು ಸೇವೆಗಳಿಗೆ ಅನ್ವಯಿಸುವುದಿಲ್ಲ

ಮಂಗಳೂರು, ಡಿ. 25: ನಗರದ ಹೊರವಲಯದ ಕೃಷ್ಣಾಪುರದಲ್ಲಿ 4ನೇ ಬ್ಲಾಕ್ ನೈತಂಗಡಿಯಲ್ಲಿ ಕಳೆದ ರಾತ್ರಿ ಅಂಗಡಿ ಮಾಲಿಕ ಜಲೀಲ್ ಅವರ ಹತ್ಯೆ ನಡೆದಿದ್ದು ಮುನ್ನೆಚ್ಚರಿಕೆ ಕ್ರಮವಾಗಿ ಸುರತ್ಕಲ್ ಸುತ್ತಮುತ್ತಲಿನ ನಾಲ್ಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಿಸಲಾಗಿದೆ.

ಮಂಗಳೂರು ನಗರ ಪೊಲೀಸ್ ‌ಕಮೀಷನರೇಟ್ ವ್ಯಾಪ್ತಿಯ ಸುರತ್ಕಲ್, ಬಜಪೆ, ಕಾವೂರು ಮತ್ತು ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ (Section 144 of CrPC has been imposedin Surathkal, Bajpe, Kavoor and Panambur PS limit in Mangaluru) ನಿಷೇಧಾಜ್ಞೆ ಜಾರಿ ಮಾಡಿ ಮಂಗಳೂರು ‌ನಗರ ಪೊಲೀಸ್ ಕಮೀಷನರ್(Mangaluru Police Commissioner) ಎನ್ ಶಶಿಕುಮಾರ್ ಐಪಿಎಸ್ ( N. SHASHI KUMAR IPS) ಆದೇಶಿಸಿದ್ದಾರೆ.

ಡಿ.27ರ ವರೆಗೆ ನಿಷೇಧಾಜ್ಞೆ:

ಇಂದು ಬೆಳಿಗ್ಗೆ 6 ಗಂಟೆಯಿಂದ ಡಿಸೆಂಬರ್ 27 ಮುಂಜಾನೆ 6 ಗಂಟೆಯವರೆಗೆವ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ. ಸರ್ಕಾರದಿಂದ ಮತ್ತು ಸರ್ಕಾರದ ಆದೇಶದಂತೆ ನಡೆಸಲ್ಪಡುವ ಯಾವುದೇ ಕಾರ್ಯಕ್ರಮ, ಸಭೆ ಸಮಾರಂಭಗಳಿಗಿದು ಅನ್ವಯಿಸುವುದಿಲ್ಲ. ಕ್ರಿಸ್ಮಸ್ ಆಚರಣೆ, ಧಾರ್ಮಿಕ ಕಾರ್ಯಕ್ರಮ ಮತ್ತು ಅಗತ್ಯ ತುರ್ತು ಸೇವೆಗಳಿಗೆ ಅನ್ವಯಿಸುವುದಿಲ್ಲ ಎಂದು ತಿಳಿಸಲಾಗಿದೆ.

ಮದ್ಯದಂಗಡಿಗಳು ಬಂದ್:

ಸುರತ್ಕಲ್, ಬಜಪೆ, ಕಾವೂರು ಮತ್ತು ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮದ್ಯ‌ ಮಾರಾಟಕ್ಕೆ ನಿಷೇಧವಿದೆ.

ಕೈಗಾರಿಕೆಗಳಿಗೆ ಪಾಳಿ ಬದಲಾವಣೆಗೆ ಸೂಚನೆ:

ಸುರತ್ಕಲ್, ಬಜಪೆ, ಕಾವೂರು, ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೈಗಾರಿಕಾ ಸಂಸ್ಥೆಗಳು ಕೆಲಸದ ಪಾಳಿಯನ್ನು ಇಂದು ಮತ್ತು ನಾಳೆ ಸಂಜೆ 6 ಗಂಟೆವರೆಗೆ ಬದಲಿಸುವಂತೆ ಸೂಚಿಸಲಾಗಿದೆ. ಸಂಜೆ 6 ರಿಂದ ಬೆಳಿಗ್ಗೆ 6 ಗಂಟೆಯವರೆಗೆ ಸಿಬ್ಬಂದಿ ಹೊರಗಡೆ ಓಡಾಡುವಂತಿಲ್ಲ.