janadhvani

Kannada Online News Paper

ಜಲೀಲ್ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ- ಪೊಲೀಸ್ ಕಮಿಷನರ್

ಮಂಗಳೂರು,ಡಿ.26: ಕಾಟಿಪಳ್ಳ ಜಲೀಲ್ ಕೊಲೆ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ.ಸದ್ಯ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.14 ದಿನ ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ.

ಇವರಲ್ಲಿ ಇಬ್ಬರು ನೇರ ಭಾಗಿಯಾಗಿದ್ದು, ಓರ್ವ ಅವರನ್ನು ಬೈಕ್ ನಲ್ಲಿ ತಂದು ಬಿಟ್ಟಿದ್ದ. ಗುರುತು ಪತ್ತೆ ಆಗೋವರೆಗೂ ಆರೋಪಿಗಳ ಮಾಹಿತಿ ಹೇಳಲು ಆಗಲ್ಲ. ನಿನ್ನೆ ರಾತ್ರಿ ಅವರನ್ನು ವಶಕ್ಕೆ ಪಡೆಯಲಾಗಿದ್ದು, ಹೆಚ್ಚಿನ ವಿಚಾರಣೆ ಮಾಡಲಾಗುತ್ತದೆ. ಕೊಲೆಗೆ ಕಾರಣ ಏನು ಅನ್ನುವುದನ್ನು ಪೂರ್ಣ ತನಿಖೆ ಬಳಿಕ ಹೇಳಲಾಗುವುದು ಎಂದು ಕಮಿಷನರ್ ಹೇಳಿದರು.

ಮೂವರಲ್ಲಿ ಇಬ್ಬರು ಈ ಹಿಂದೆ ಹಲವು ಪ್ರಕರಣಗಳ ಆರೋಪಿಗಳು. 2021ರಲ್ಲಿ ನಡೆದ ಕೊಲೆ ಯತ್ನ ಕೇಸ್ ವೊಂದರಲ್ಲೂ ಅವರು ಇದ್ದರು. ಜಲೀಲ್ ಕೇಸ್ ನಲ್ಲಿ ಮಹಿಳೆಯರೂ ಸೇರಿ 10-12 ಜನರನ್ನ ವಶಕ್ಕೆ ಪಡೆದಿದ್ದೆವು. ಜಲೀಲ್ ಕುಟುಂಬಸ್ಥರು ಸೇರಿ ಕೆಲವರ ವಿಚಾರಣೆ ನಡೆದಿದೆ.

ಆದರೆ ಸದ್ಯ ಒಟ್ಟು 3 ಜನರನ್ನ ಮಾತ್ರ ಬಂಧನ ಮಾಡಲಾಗಿದೆ ಎಂದು ಅವರು ಹೇಳಿದರು.

error: Content is protected !! Not allowed copy content from janadhvani.com