ಮಂಗಳೂರು,ಡಿ-27):- ಸುರತ್ಕಲ್ ಜಲೀಲ್ ಹತ್ಯೆ ಖಂಡಿಸಿ ಹಾಗೂ ಸರ್ಕಾರ ನಡೆದುಕೊಂಡ ತಾರತಮ್ಯ ನೀತಿಯನ್ನು ವಿರೋಧಿಸಿ ಎಸ್ಎಸ್ಎಫ್ ಹಾಗೂ ಎಸ್ ವೈಎಸ್ ಸಂಘಟನೆ ವತಿಯಿಂದ ಇಂದು ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನೆಗೆ ಎಸ್‌ಡಿಪಿಐ ದ.ಕ ಜಿಲ್ಲಾ ಸಮಿತಿ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದೆ ಎಂದು ಎಸ್‌ಡಿಪಿಐ ದ.ಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನ್ವರ್ ಸಾದಾತ್ ಬಜತ್ತೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇಂದು ದಿನಾಂಕ 27-12-2022 ರಂದು ಸಂಜೆ 3 ಗಂಟೆಗೆ ಮಂಗಳೂರಿನ ಕ್ಲಾಕ್ ಟವರ್ ಮುಂಭಾಗದಲ್ಲಿ ಪ್ರಜಾಸತ್ತಾತ್ಮಕ ವಾಗಿ ನಡೆಯುವ ಪ್ರತಿಭಟನೆಯಲ್ಲಿ ಜಾತಿ ಭೇದ ಮರೆತು ಎಲ್ಲರೂ ಭಾಗವಹಿಸಿ ಹೋರಾಟವನ್ನು ಯಶಸ್ವಿ ಗೊಳಿಸಬೇಕೆಂದು ಅವರು ವಿನಂತಿಸಿದ್ದಾರೆ.