ಮಂಗಳೂರು ಮುಸ್ಲಿಂ ಮುಖಂಡರ ನಿಯೋಗ ಇಂದು ಬೆಳಗಾವಿಯ ವಿಧಾನಸೌಧದಲ್ಲಿ ಮಂಗಳೂರಿನ ಕಾಟಿಫಳ್ಳದಲ್ಲಿ ದುಷ್ಕರ್ಮಿಗಳಿಂದ ಹತ್ಯೆಯಾದ ಜಲೀಲ್ ಕುಟುಂಬಕ್ಕೆ ಪರಿಹಾರ ನೀಡುವಂತೆ ಮನವಿ ಮಾಡಲಾಯಿತು, ಹಾಗೂ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಂಡು ಜಿಲ್ಲೆಯಲ್ಲಿ ಶಾಂತಿ ನೆಲೆಸುವಂತೆ ಎಲ್ಲಾ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಯಿತು.
ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಮಾಜಿ ಮೂಡ ಅಧ್ಯಕ್ಷರಾದ ಕೋಡಿಜಾಲ್ ಇಬ್ರಾಹಿಂ, ಮಾಜಿ ಮೇಯರ್ ಹಾಗೂ ಮುಸ್ಲಿಂ ಒಕ್ಕೂಟದ ಅಧ್ಯಕ್ಷರಾದ ಕೆ ಅಶ್ರಫ್ , ಮುಸ್ಲಿಂ ಒಕ್ಕೂಟದ ಉಪಾಧ್ಯಕ್ಷರಾದ ಅದ್ದು ಕೃಷ್ಣಾಪುರ, ಮುಸ್ಲಿಂ ಒಕ್ಕೂಟದ ಕಾರ್ಯದರ್ಶಿಯಾದ ಸಿ ಎಮ್ ಮುಸ್ತಫ ಉಪಸ್ಥಿತರಿದ್ದರು.