ಸಾಮಾಜಿಕ , ಶೈಕ್ಷಣಿಕ ಪ್ರಗತಿಗಾಗಿ ಕಾರ್ಯಾಚರಿಸುತ್ತಿರುವ ಸುನ್ನೀ ವಿದ್ಯಾರ್ಥಿ ಒಕ್ಕೂಟ , ಕರ್ನಾಟಕ ರಾಜ್ಯ ಸುನ್ನೀ ಸೂಡೆಂಟ್ಸ್ ಫೆಡರೇಷನ್ ( ಎಸ್ಸೆಸ್ಸೆಫ್ ) ಇದರ ಸದಸ್ಯತ್ವ ಅಭಿಯಾನ 2023 ಜನವರಿ 1 ರಿಂದ 10 ರ ತನಕ ರಾಜ್ಯಾದ್ಯಂತ ನಡೆಯಲಿದೆ . ಎಸ್ಸೆಸ್ಸೆಫ್ ಕರ್ನಾಟಕದ ಮಣ್ಣಿನಲ್ಲಿ ಸುಮಾರು ನಾಲ್ಕು ದಶಕಗಳಿಂದ ಯಶಸ್ವಿಯಾಗಿ ಕಾರ್ಯಾಚರಣೆ ಮಾಡುತ್ತಿದ್ದು ಧಾರ್ಮಿಕ , ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ಚುರುಕಿನ ಕಾರ್ಯಾಚರಣೆ ಮಾಡುವ ಮೂಲಕ ಲಕ್ಷಾಂತರ ವಿದ್ಯಾರ್ಥಿಗಳನ್ನು ಈ ನಾಡಿಗೆ ಸಮರ್ಪಿಸಿದೆ.
ಈ ಕಲುಷಿತಗೊಂಡಿರುವ ವಾತಾವರಣದಲ್ಲಿ ಹಾದಿ ತಪ್ಪುತ್ತಿರುವ ವಿದ್ಯಾರ್ಥಿ ಸಮೂಹಕ್ಕೆ ಧಾರ್ಮಿಕತೆ , ನೈತಿಕತೆ ಹಾಗೂ ಅಧ್ಯಾತ್ಮಿಕತೆಯನ್ನು ತುಂಬಿ ಸಮಾಜದ ಸತ್ಪಜೆಗಳನ್ನಾಗಿ ಮಾಡುವಲ್ಲಿ ಎಸ್ಸೆಸ್ಸೆಫ್ ಯಶಸ್ವಿಯಾಗಿದೆ. ರಾಷ್ಟ್ರದಾದ್ಯಂತ ಕಾರ್ಯಾಚರಿಸುತ್ತಿರುವ ಈ ಸಂಘಟನೆಗೆ ಇದೀಗ ಐದು ದಶಕಗಳು ತುಂಬಿ ಸುವರ್ಣ ಮಹೋತ್ಸವ ಆಚರಣೆಯಲ್ಲಿದೆ.
ಕರ್ನಾಟಕ ಉಲಮಾ ಒಕ್ಕೂಟದ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಸುನ್ನೀ ವಿದ್ಯಾರ್ಥಿ ಒಕ್ಕೂಟವಾದ ಎಸ್ಸೆಸ್ಸೆಫ್ ಯುವಜನ ಒಕ್ಕೂಟವಾದ ಎಸ್.ವೈ.ಎಸ್ , ಕರ್ನಾಟಕ ಮುಸ್ಲಿಂ ಜಮಾಅತ್ ಮೂರು ಸಂಘಟನೆಗಳು ಸಂಯುಕ್ತವಾಗಿ ಸದಸ್ಯತ್ವ ಅಭಿಯಾನ ನಡೆಸಲಿದೆ .
‘ ವ್ಯರ್ಥವಾಗದಿರಲಿ ಯೌವ್ವನ ‘ ಎಂಬ ಧ್ಯೇಯ ವಾಕ್ಯದಡಿ ಎಸ್.ಎಸ್.ಎಫ್ 12 ವಯಸ್ಸಿನಿಂದ 32 ವಯಸ್ಸಿನವರೆಗೆ ಇರುವ , ಸಂಘಟನೆಯ ತತ್ವ ಸಿದ್ಧಾಂತಗಳಲ್ಲಿ ಬದ್ದರಾದ ವಿದ್ಯಾರ್ಥಿಗಳು , ಯುವಕರು ಸಂಘಟನೆಯ ಸದಸ್ಯತ್ವ ಅಭಿಯಾನದಲ್ಲಿ ಕೈಜೋಡಿಸಲಿದ್ದಾರೆ.
ಹನ್ನೆರಡು ವಯಸ್ಸಿನಿಂದ ಮೂವತ್ತೆರಡು ವಯಸ್ಸು ಪ್ರಾಯ ಮಿತಿಯಲ್ಲಿರುವ ಸುನ್ನೀ ಯುವಕರು ಈ ಅವಧಿಯಲ್ಲಿ ಸದಸ್ಯತ್ವ ಪಡೆದು ಮುಂದಿನ ದಿನಗಳಲ್ಲಿ ನಾಡಿಗೂ , ಕುಟುಂಬಕ್ಕೂ , ರಾಷ್ಟ್ರಕ್ಕೂ ಬೆನ್ನೆಲುಬಾಗಿ ನಿಲ್ಲುವ ಪ್ರಜೆಗಳಾಗಬೇಕಿದೆ ಎಂದು ಎಸ್ಸೆಸ್ಸೆಫ್ ರಾಜ್ಯ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮುನೀರ್ ಅಹ್ಮದ್ ಸಖಾಫಿ , ಉಳ್ಳಾಲ ( ಕಾರ್ಯದರ್ಶಿ , ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ )ಹಾಗೂ ಇಕ್ಬಾಲ್ ಮಧ್ಯನಡ್ಕ ( ಕೋಶಾಧಿಕಾರಿ ಎಸ್ಸೆಸ್ಸೆಫ್ ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ) ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಬೆಳ್ಳಾರೆ: ದಾರುಲ್ ಹಿಕ್ಮ ಯುನಿಟಿ ಕಾನ್ಕ್ಲೇವ್ ಸಂಪನ್ನ
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ