ಮಂಗಳೂರು: “ಲಹರಿಯ ಆವೇಶ ಸಮಾಜದ ವಿನಾಶ” ಎಂಬ ಘೋಷಣೆಯೊಂದಿಗೆ, ಸುನ್ನೀ ಜಂಇಯ್ಯತುಲ್ ಮುಅಲ್ಲಿಮೀನ್ ಕರ್ನಾಟಕ ರಾಜ್ಯ ಸಮಿತಿಯು, ರಾಜ್ಯದಾದ್ಯಂತ ರೇಂಜ್ ಕೇಂದ್ರಗಳಲ್ಲಿ, ಮಾದಕದ್ರವ್ಯ ವಿರೋಧಿ ಜನಜಾಗೃತಿ ಅಭಿಯಾನ ಪ್ರಯುಕ್ತ ನಡೆಯುವ SBS ಬಾಲ ಮಸೀರ (ಮದ್ರಸಾ ವಿದ್ಯಾರ್ಥಿಗಳ ರ್ಯಾಲಿ) ಹಾಗೂ ಸಂದೇಶ ಭಾಷಣ ಕಾರ್ಯಕ್ರಮದ ಪೋಸ್ಟರ್ ಮತ್ತು ಕರಪತ್ರವನ್ನು, SJM ರಾಜ್ಯ ಕಛೇರಿ ಮಂಗಳೂರು ನಲ್ಲಿ ಬಿಡುಗಡೆಗೊಳಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ, ರಾಜ್ಯ ಪ್ರಧಾನ ಕಾರ್ಯದರ್ಶಿ KKM ಕಾಮಿಲ್ ಸಖಾಫಿ ಯವರು, ಜಾತಿ ಧರ್ಮ ಭೇದವಿಲ್ಲದೆ ಸರ್ವರಿಗೂ ಇಂದು ತಲೆನೋವಾಗಿ ಪರಿಣಮಿಸಿರುವ ಮಾದಕದ್ರವ್ಯ ಸೇವನೆಯು, ಸ್ವಸ್ಥ ಸಮಾಜವನ್ನು ವಿನಾಶಕ್ಕೆ ತಳ್ಳುತ್ತಿದೆ. ಪ್ರಾಥಮಿಕ ಶಾಲೆಯಿಂದ ಆರಂಭಗೊಂಡು ಡಿಗ್ರಿ ಸ್ನಾತಕೋತ್ತರ ಪದವಿ ಪಡೆದವರು ಅಲ್ಲದವರೂ ಇದಕ್ಕೆ ಬಲಿಯಾಗಿರುವುದು ಖೇದಕರ.
ಈ ನಿಟ್ಟಿನಲ್ಲಿ ಸುನ್ನೀ ಜಂ-ಇಯ್ಯತುಲ್ ಮುಅಲ್ಲಿಮೀನ್ ಕರ್ನಾಟಕ ರಾಜ್ಯ ಸಮಿತಿಯು ರಾಜ್ಯದಾದ್ಯಂತ ರೇಂಜ್ ಕೇಂದ್ರಗಳಲ್ಲಿ ಮಾದಕದ್ರವ್ಯ ವಿರೋಧಿ ಜನಜಾಗೃತಿ ಅಭಿಯಾನ ಹಮ್ಮಿಕೊಂಡಿದ್ದು, ಇದರ ಭಾಗವಾಗಿ ಮದ್ರಸಾ SBS ವಿದ್ಯಾರ್ಥಿಗಳಿಂದ ಬಾಲ ಮಸೀರ (ರ್ಯಾಲಿ) ಹಾಗೂ ಸಂದೇಶ ಭಾಷಣ ಕಾರ್ಯಕ್ರಮಗಳು ನಡೆಯಲಿವೆ. ಇದರ ಪೋಸ್ಟರ್ ಮತ್ತು ಕರಪತ್ರ ಈಗಾಗಲೇ ಬಿಡುಗಡೆಯಾಗಿದೆ. ಸರ್ವ ಶಾಂತಿ ಪ್ರಿಯರು ಕೈ ಜೋಡಿಸಬೇಕೆಂದು ಕರೆ ನೀಡಿದರು.
ರಾಜ್ಯ ಮಿಶನರಿ ವಿಭಾಗದ ಕಾರ್ಯದರ್ಶಿ NM ಶರೀಫ್ ಸಖಾಫಿ ನೆಕ್ಕಿಲ್ ರವರು ಸ್ವಾಗತಿಸಿದರು. ರಾಜ್ಯ ಉಪಾಧ್ಯಕ್ಷರಾದ ಮುಫತ್ತಿಶ್ ಹನೀಫ್ ಮಿಸ್ಬಾಹಿ ಪ್ರಾರ್ಥಿಸಿದರು. ವೇದಿಕೆಯಲ್ಲಿ ರಾಜ್ಯ ಕಾರ್ಯದರ್ಶಿಗಳಾದ ಅಬ್ದುಲ್ ಅಝೀಝ್ ನೂರಾನಿ, ಇಬ್ರಾಹಿಂ ಸಖಾಫಿ ಕಬಕ, ದಾವಣಗೆರೆ ಜಿಲ್ಲಾ ಮಿಶನರಿ ಕಾರ್ಯದರ್ಶಿ ಶಿಹಾರುದ್ದೀನ್ ಹಿಮಮಿ, ದಕ್ಷಿಣ ಕನ್ನಡ ಜಿಲ್ಲಾ ವೆಸ್ಟ್ ಮಿಶನರಿ ಕಾರ್ಯದರ್ಶಿ ಇಬ್ರಾಹಿಂ ಖಲೀಲ್ ಮುಸ್ಲಿಯಾರ್, ಉಡುಪಿ ಜಿಲ್ಲಾ ಮಿಶನರಿ ಕಾರ್ಯದರ್ಶಿ ಉಮರ್ ಸಅದಿ ಅಲ್ ಅಫ್ಳಲಿ ಮೊದಲಾದವರು ಉಪಸ್ಥಿತರಿದ್ದರು.

















ಇನ್ನಷ್ಟು ಸುದ್ದಿಗಳು
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
ಖತಾರ್ನಲ್ಲಿ ಉದ್ಯೋಗಾವಕಾಶ: ಅಕೌಂಟಿಂಗ್, ಐಟಿ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಭಾರಿ ಬೇಡಿಕೆ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ