ಮಂಗಳೂರು : ಸುನ್ನೀ ಮೆನೇಜ್ ಮೆಂಟ್ ಅಸೋಸಿಯೇಷನ್ ರಾಜ್ಯ ಸಮಿತಿಯ ವತಿಯಿಂದ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ರೀಜಿನಲ್ ಗೊಳಪಟ್ಟ ಹೊಸಳ್ಳಿಯಲ್ಲಿ ನಿರ್ಮಿಸಲು ಉದ್ದೇಶಿಸಿದ ನೂತನ ಮದ್ರಸ ಕಟ್ಟಡಕ್ಕೆ ಖಾಝಿ ಖುರ್ರತುಸ್ಸಾದಾತ್ ಸಯ್ಯಿದ್ ಕೂರ ತಂಙ್ಙಳ್ ರವರಿಂದ ಶಿಲಾನ್ಯಾಸ ಕಾರ್ಯಕ್ರಮವನ್ನು ನಡೆಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಎಂ.ಎ ರಾಜ್ಯಾಧ್ಯಕ್ಷರಾದ ಉಜಿರೆ ಸಯ್ಯಿದ್ ಇಸ್ಮಾಯೀಲ್ ಅಲ್-ಹಾದೀ ತಂಙ್ಙಳ್ ಮದನಿಯವರು ವಹಿಸಿದ್ದರು. ಕರ್ನಾಟಕ ಸರ್ಕಾರದ ವಕ್ಫ್ ಮಂಡಳಿ ಅಧ್ಯಕ್ಷ ಮೌಲಾನ ಎನ್.ಕೆ.ಎಂ.ಶಾಫೀ ಸಅದಿಯವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ರಾಜ್ಯ ಪ್ರಧಾನ ಕಾರ್ಯದರ್ಶಿ ಜೆಪ್ಪು ಅಬ್ದುರ್ರಹ್ಮಾನ್ ಮದನಿಯವರು ಪ್ರಾಸ್ತಾವಿಕ ಭಾಷಣ ಮಾಡಿದರು. ರಾಜ್ಯ ಕ್ಷೇಮ ಕಾರ್ಯ ವಿಭಾಗದ ಕಾರ್ಯದರ್ಶಿ ಮೂಡಡ್ಕ ಅಶ್ರಫ್ ಸಖಾಫಿ ಮುಖ್ಯ ಪ್ರಭಾಷಣ ನಡೆಸಿದರು.

ಎಸ್.ಎಂ.ಎ. ರಾಜ್ಯ ಕೋಶಾಧಿಕಾರಿ ಕೊಡುಂಗಾಯಿ ಅಬ್ದುಲ್ ಹಮೀದ್ ಹಾಜಿ, ಶಿವಮೊಗ್ಗ ಜಿಲ್ಲಾಧ್ಯಕ್ಷ ಕಡ್ತೂರು ಇಬ್ರಾಹೀಂ ಹಾಜಿ ಶುಭಾಶಂಸಗೈದರು. ರಾಜ್ಯ ಸಂಘಟನಾ ಕಾರ್ಯದರ್ಶಿ ಎಂ.ಬಿ.ಎಂ. ಸಾದಿಕ್ ಮಲೆಬೆಟ್ಟು ಕಾರ್ಯಕ್ರಮ ನಿರೂಪಿಸಿದರು. ವೇದಿಕೆಯಲ್ಲಿ ಸಯ್ಯಿದ್ ಭಾಷಾ ತಂಙ್ಙಳ್ ಸಾಗರ, ರಾಜ್ಯ ಕ್ಷೇಮ ಕಾರ್ಯ ವಿಭಾಗದ ಅಧ್ಯಕ್ಷ ಎ.ಕೆ.ಅಹ್ಮದ್, ಟ್ರೈನಿಂಗ್ ವಿಭಾಗದ ಅಧ್ಯಕ್ಷ ಬೆಜ್ಜವಳ್ಳಿ ಹನೀಫ್, ಪಬ್ಲಿಕ್ ರಿಲೇಷನ್ ಕಾರ್ಯದರ್ಶಿ ಪಿ.ಎಂ.ಮುಹಮ್ಮದ್ ಮದನಿ ಪೂಡಲ್, ಎಸ್.ಎಂ.ಎ. ದ.ಕ. ವೆಸ್ಟ್ ಜಿಲ್ಲಾಧ್ಯಕ್ಷ ಅಡ್ಯಾರ್ ಪದವು ಇಸ್ಮಾಯೀಲ್ ಉಪಸ್ಥಿತರಿದ್ದರು.
ಕಾರ್ಯಕ್ರಮದ ಪ್ರಾರಂಭದಲ್ಲಿ ಎಸ್.ಎಂ.ಎ. ಶಿವಮೊಗ್ಗ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಾಹುಲ್ ಹಮೀದ್ ಮುಸ್ಲಿಯಾರ್ ಸ್ವಾಗತಿಸಿ ಕೊನೆಯಲ್ಲಿ ತೀರ್ಥಹಳ್ಳಿ ರೀಜಿನಲ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಶೀದ್ ಮದನಿ ಕಡ್ತೂರು ಧನ್ಯವಾದ ಸಮರ್ಪಿಸಿದರು.
















ಇನ್ನಷ್ಟು ಸುದ್ದಿಗಳು
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ
ಮದ್ರಸ ಮುಅಲ್ಲಿಮರ ಮೇಲೆ ಹಲ್ಲೆ ಪ್ರಕರಣ: ಎಸ್ಜೆಎಂ ದ.ಕ. ಸೌತ್ ಜಿಲ್ಲಾ ಸಮಿತಿ ತೀವ್ರ ಖಂಡನೆ