janadhvani

Kannada Online News Paper

ದೇಶದಾದ್ಯಂತ 74ನೇ ಗಣರಾಜ್ಯೋತ್ಸವ ಸಂಭ್ರಮ- ಶುಭಕೋರಿದ ಪ್ರಧಾನಿ

ನವದೆಹಲಿ: ದೇಶದಾದ್ಯಂತ 74ನೇ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದ್ದು, ಈ ಹಿನ್ನೆಲೆಯಲ್ಲಿ  ನರೇಂದ್ರ ಮೋದಿ ಅವರು ಗುರುವಾದ ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಗಣರಾಜ್ಯೋತ್ಸವದ ಶುಭಾಶಯಗಳು. ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಗಣರಾಜ್ಯೋತ್ಸವ ಆಚರಿಸುತ್ತಿರುವುದು ಈ ಬಾರಿಯ ವಿಶೇಷವಾಗಿದೆ. ದೇಶದ ಮಹಾನ್ ಸ್ವಾತಂತ್ರ್ಯ ಹೋರಾಟಗಾರರ ಕನಸುಗಳನ್ನು ನನಸಾಗಿಸಲು ನಾವು ಒಗ್ಗಟ್ಟಿನಿಂದ ಮುನ್ನಡೆಯಲು ಬಯಸುತ್ತೇವೆ. ಎಲ್ಲಾ ಭಾರತೀಯರಿಗೆ ಗಣರಾಜ್ಯೋತ್ಸವದ ಶುಭಾಶಯಗಳು ಎಂದು ಹೇಳಿದ್ದಾರೆ.

error: Content is protected !! Not allowed copy content from janadhvani.com