janadhvani

Kannada Online News Paper

180ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತ ಏರ್ ಏಷ್ಯಾ ವಿಮಾನಕ್ಕೆ ಹಕ್ಕಿ ಡಿಕ್ಕಿ- ತುರ್ತು ಭೂಸ್ಪರ್ಶ

ಲಕ್ನೋ: ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪ್ರಯಾಣಿಕರನ್ನು ಹೊತ್ತು ಹೊರಟಿದ್ದ ಏರ್‌ಏಷ್ಯಾ(Air Asia) ವಿಮಾನಕ್ಕೆ ಹಕ್ಕಿಯೊಂದು ಡಿಕ್ಕಿ ಹೊಡೆದ ಪರಿಣಾಮ ಟೇಕ್ ಆಫ್ ಆದ ಕೆಲವೇ ಹೊತ್ತಿನಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

ಭಾನುವಾರ ಲಕ್ನೋ ವಿಮಾನ ನಿಲ್ದಾಣದಿಂದ ಕೊಲ್ಕತ್ತಾಕ್ಕೆ ಹೊರಟಿದ್ದ 180ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತ ಏರ್ ಏಷ್ಯಾ ಟೇಕ್ ಆಫ್ ಆದ ಕೆಲವೇ ಹೊತ್ತಿನಲ್ಲಿ ಹಕ್ಕಿ ಡಿಕ್ಕಿ ಹೊಡೆದಿದೆ ಪರಿಣಾಮ ಸುರಕ್ಷತಾ ದೃಷ್ಟಿಯಿಂದ ಲಕ್ನೋದ ಚೌಧರಿ ಚರಣ್ ಸಿಂಗ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿಸಲಾಯಿತು. ಬಳಿಕ ಪ್ರಯಾಣಿಕರಿಗೆ ಬೇರೊಂದು ವಿಮಾನದ ವ್ಯವಸ್ಥೆ ಮಾಡಲಾಯಿತು, ಘಟನೆ ಸಂಬಂಧ ತಪಾಸಣೆ ನಡೆಸಲಾಗುತ್ತಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.

error: Content is protected !! Not allowed copy content from janadhvani.com