janadhvani

Kannada Online News Paper

ಬಸ್‌ ಪಾಸ್‌ ವಿಳಂಬ: ಹಳೆಯ ಬಸ್ ಪಾಸ್ ನಲ್ಲಿ ಪ್ರಯಾಣಿಸಲು ಅವಕಾಶ

ಬೆಂಗಳೂರು: ಪಿಯು ವಿದ್ಯಾರ್ಥಿಗಳಿಗೆ ಬಸ್‌ ಪಾಸ್‌ ವಿತರಿಸುವುದು ತಡವಾಗುವುದರಿಂದ ಜೂನ್‌ವರೆಗೂ ಹಳೆಯ ಬಸ್ ಪಾಸ್ ನಲ್ಲಿ ಉಚಿತ ಪ್ರಯಾಣಕ್ಕೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಅನುವು ಮಾಡಿಕೊಟ್ಟಿದೆ.

2017–18ನೇ ಸಾಲಿನಲ್ಲಿ ಪ್ರಥಮ ಪಿಯುಸಿ ವೇಳೆ ಪಾಸ್‌ ಪಡೆದಿರುವ ವಿದ್ಯಾರ್ಥಿಗಳು, ಈ ಸಾಲಿನ ಪಾಸ್‌ ವಿತರಿಸುವವರೆಗೂ ಹಳೆಯ ಪಾಸಿನಲ್ಲಿ ನಮೂದಿಸಿರುವ ಮಾರ್ಗದಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

‘ಪ್ರತಿ ವರ್ಷ ಜೂನ್‌ ತಿಂಗಳಲ್ಲಿ ನೂತನ ಶೈಕ್ಷಣಿಕ ವರ್ಷದ ಬಸ್‌ ಪಾಸ್‌ ವಿತರಿಸುತ್ತೇವೆ. ಆದರೆ, ಈ ಬಾರಿ ದ್ವಿತೀಯ ಪಿಯು ತರಗತಿಗಳು ಮುಂಚಿತವಾಗಿ ಪ್ರಾರಂಭಗೊಂಡಿದ್ದು, ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ಈ ವ್ಯವಸ್ಥೆ ಮಾಡಲಾಗಿದೆ’ ಎಂದಿದೆ.

ಸಮಯ ಬದಲು: ಉತ್ತರ ಕರ್ನಾಟಕದಲ್ಲಿ ಬಿಸಿಲಿನ ಪ್ರಖರತೆ ಹೆಚ್ಚಿರುವುದರಿಂದ ಮೇ ತಿಂಗಳಲ್ಲಿ ಕಾಲೇಜಿನ ವೇಳೆಯನ್ನು ಬೆಳಿಗ್ಗೆ 8 ರಿಂದ 11ರವರೆಗೆ ಬದಲಿಸಬೇಕೆಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ನಿರ್ದೇಶಿಸಿದ್ದಾರೆ.

error: Content is protected !! Not allowed copy content from janadhvani.com