ವಿಟ್ಲ ಸಮೀಪದ ಸ್ಥಳೀಯ ಸಂಘಟನೆಯೊಂದು ಹಮ್ಮಿಕೊಂಡಿದ್ದ ಶೈಕ್ಷಣಿಕ ಕಾರ್ಯಕ್ರಮದಲ್ಲಿ ಅಶಾಂತಿ ಸೃಷ್ಟಿಸಿರುವ ಪುಂಡರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯಸಮಿತಿ ಆಗ್ರಹಿಸಿದೆ.
ಕಳೆದ ಹಲವು ವರ್ಷಗಳಿಂದ ಜಾತಿ ಮತ ಪಂಗಡ ವ್ಯತ್ಯಾಸ ಇಲ್ಲದೇ ಎಲ್ಲರ ಮಕ್ಕಳಿಗೆ ಶೈಕ್ಷಣಿಕ ಸ್ಪೂರ್ತಿದಾಯಕ ತರಗತಿಗಳನ್ನು ನಡೆಸುತ್ತಾ ಬಂದಿರುವ ರಫೀಖ್ ರ ಮೇಲೆ ಸುಳ್ಳಾರೋಪ ಹೊರಿಸಿದ್ದು ಖಂಡನೀಯವಾಗಿದೆ.
ಎಳೆಯ ಮಕ್ಕಳ ಮುಂದೆ ಪುಂಡಾಟಿಕೆ ನಡೆಸುವುದರಿಂದ ಮಕ್ಕಳ ಮನಸಿನ ಮೇಲೆ ಗಂಭೀರ ದುಷ್ಪರಿಣಾಮ ಬೀರುವ ಅಪಾಯ ಇರುವುದರಿಂದ ಮಕ್ಕಳ ಹಕ್ಕುಗಳ ರಕ್ಷಣ ಆಯೋಗ ಮಧ್ಯೆ ಪ್ರವೇಶಿಸಬೇಕು.
ಇಂತಹ ಬೆಳವಣಿಗೆಗಳು ಜಿಲ್ಲೆಯಲ್ಲಿ ಮರುಕಳಿಸದಂತೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮುಸ್ಲಿಂ ಜಮಾಅತ್ ರಾಜ್ಯ ಕಾರ್ಯದರ್ಶಿ ಹಮೀದ್ ಬಜ್ಪೆ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.


