ವಿಟ್ಲ ಸಮೀಪದ ಸ್ಥಳೀಯ ಸಂಘಟನೆಯೊಂದು ಹಮ್ಮಿಕೊಂಡಿದ್ದ ಶೈಕ್ಷಣಿಕ ಕಾರ್ಯಕ್ರಮದಲ್ಲಿ ಅಶಾಂತಿ ಸೃಷ್ಟಿಸಿರುವ ಪುಂಡರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯಸಮಿತಿ ಆಗ್ರಹಿಸಿದೆ.
ಕಳೆದ ಹಲವು ವರ್ಷಗಳಿಂದ ಜಾತಿ ಮತ ಪಂಗಡ ವ್ಯತ್ಯಾಸ ಇಲ್ಲದೇ ಎಲ್ಲರ ಮಕ್ಕಳಿಗೆ ಶೈಕ್ಷಣಿಕ ಸ್ಪೂರ್ತಿದಾಯಕ ತರಗತಿಗಳನ್ನು ನಡೆಸುತ್ತಾ ಬಂದಿರುವ ರಫೀಖ್ ರ ಮೇಲೆ ಸುಳ್ಳಾರೋಪ ಹೊರಿಸಿದ್ದು ಖಂಡನೀಯವಾಗಿದೆ.
ಎಳೆಯ ಮಕ್ಕಳ ಮುಂದೆ ಪುಂಡಾಟಿಕೆ ನಡೆಸುವುದರಿಂದ ಮಕ್ಕಳ ಮನಸಿನ ಮೇಲೆ ಗಂಭೀರ ದುಷ್ಪರಿಣಾಮ ಬೀರುವ ಅಪಾಯ ಇರುವುದರಿಂದ ಮಕ್ಕಳ ಹಕ್ಕುಗಳ ರಕ್ಷಣ ಆಯೋಗ ಮಧ್ಯೆ ಪ್ರವೇಶಿಸಬೇಕು.
ಇಂತಹ ಬೆಳವಣಿಗೆಗಳು ಜಿಲ್ಲೆಯಲ್ಲಿ ಮರುಕಳಿಸದಂತೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮುಸ್ಲಿಂ ಜಮಾಅತ್ ರಾಜ್ಯ ಕಾರ್ಯದರ್ಶಿ ಹಮೀದ್ ಬಜ್ಪೆ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ