ಬೆಂಗಳೂರು: ರಾಜ್ಯ ಸರಕಾರವು ತುರ್ತಾಗಿ ಮೀಸಲಾತಿ ಪರಿಷ್ಕರಣೆ ಮಾಡಿ ಆದೇಶ ಹೊರಡಿಸಿರುವುದನ್ನು ಎಸ್ಸೆಸ್ಸೆಫ್ ರಾಜ್ಯ ಸಮಿತಿ ಖಂಡಿಸಿದೆ.
ಎಸ್ಸಿ ಎಸ್ಟಿ ಸಮುದಾಯಗಳಿಗೆ ಒಳ ಮೀಸಲಾತಿ ಪ್ರಕಟಿಸಿರುವುದು ಸ್ವಾಗತಾರ್ಹವಾಗಿದೆ. ಆದರೆ ಈ ತನಕ ಮುಸ್ಲಿಮರಿಗೆ 2B ಅಡಿಯಲ್ಲಿ ನೀಡಲಾಗುತ್ತಿದ್ದ 4% ಮೀಸಲಾತಿಯನ್ನು ರದ್ದುಪಡಿಸಿರುವುದು ತಾರತಮ್ಯದ ಸ್ಪಷ್ಟ ನಿದರ್ಶನವಾಗಿದೆ.
ದೇಶದ ಆರ್ಥಿಕ ಪ್ರಗತಿಯಲ್ಲಿ ಮಹತ್ತರ ಕೊಡುಗೆ ನೀಡುತ್ತಿರುವ ಮುಸ್ಲಿಮರು, ಧಾರ್ಮಿಕ ಅಲ್ಪ ಸಂಖ್ಯಾತರು ಎಂಬ ಕಾರಣಕ್ಕೆ ನ್ಯಾಯಯುತವಾದ ಮೀಸಲಾತಿ ಪಡೆಯುತ್ತಿದ್ದರು. ಅದನ್ನು ರದ್ದುಪಡಿಸುವ ಮೂಲಕ ಕೋಮುವಾದಿಗಳನ್ನು ತೃಪ್ತಿಪಡಿಸುವ ಕಾರ್ಯವನ್ನು ಸರಕಾರ ಮಾಡಿದೆ.
“ಸಮಾನತೆಯ ಅವಕಾಶ ಎಂಬ ತತ್ವ ಹಾಗೂ ಪ್ರಭುತ್ವದಲ್ಲಿ ಪ್ರಾತಿನಿಧ್ಯ ಪಡೆಯದ ಸಮುದಾಯಗಳ ಬೇಡಿಕೆಯನ್ನು ಪೂರೈಸುವುದು ಎಂಬ ಎರಡು ಅಂಶಗಳನ್ನು ಕಾಪಾಡಿಕೊಳ್ಳಬೇಕು’” ಎಂದು ಸಂವಿಧಾನ ರಚನಾ ಸಭೆಯ ಭಾಷಣದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಪ್ರತಿಪಾದಿಸಿದ್ದರು.
ಅಂಬೇಡ್ಕರ್ ರ ಆಶಯದಂತೆ ಸೂಕ್ತವಾದ ರಾಜಕೀಯ ಪ್ರಾತಿನಿಧ್ಯದಿಂದ ವಂಚಿತರಾಗಿರುವ ಸಮುದಾಯವಾಗಿರುವ ಮುಸ್ಲಿಮರಿಗೆ ಧಾರ್ಮಿಕ ಅಲ್ಪಸಂಖ್ಯಾತರಿಗೆಂಬ ನಿಟ್ಟಿನಲ್ಲಿ ನೀಡಲಾಗುತ್ತಿದ್ದ ಮೀಸಲಾತಿಯನ್ಜು ರದ್ದುಪಡಿಸಿರುವ ಆದೇಶವನ್ನು ಮರುಪರಿಶೀಲಿಸಬೇಕು ಎಂದು ಎಸ್ಸೆಸ್ಸೆಫ್ ರಾಜ್ಯ ಸಮಿತಿಯು ಪತ್ರಿಕಾ ಪ್ರಕಟನೆಯಲ್ಲಿ ಆಗ್ರಹಿಸಿದೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ