ಬೆಂಗಳೂರು : 2ಬಿ ಮೀಸಲಾತಿ ರದ್ದು ಆದೇಶದ ಸಾಧಕ ಬಾಧಕಗಳ ಬಗ್ಗೆ ಮಾಹಿತಿ ನೀಡುವ ಪ್ರಯುಕ್ತ ಕಾರ್ಯಾಗಾರವನ್ನು ಬೆಂಗಳೂರಿನಲ್ಲಿ ಆಯೋಜಿಸಲಾಗಿದೆ..
ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯಾಧ್ಯಕ್ಷ ಹಾಫಿಝ್ ಸುಫ್ಯಾನ್ ಸಖಾಫಿ ಅಲ್ ಹಿಕಮಿ ಅಧ್ಯಕ್ಷತೆ ವಹಿಸಲಿದ್ದು, ಪ್ರಜಾವಾಣಿ ದೈನಿಕ ಸಂಪಾದಕ ಬಿಎಂ ಹನೀಫ್ ಬೆಂಗಳೂರು ಸಭೆಯನ್ನು ಉದ್ಘಾಟಿಸಲಿದ್ದಾರೆ.
ಖ್ಯಾತ ಚಿಂತಕ, ಸಾಹಿತಿ , ಹೋರಾಟಗಾರ ಶಿವಸುಂದರ್ ಬೆಂಗಳೂರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದು ರಾಜ್ಯದ ವಿವಿಧ ಜಿಲ್ಲೆಗಳಿಂದ ಆಯ್ದ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ಪ್ರಧಾನ ಕಾರ್ಯದರ್ಶಿ ಸಫ್ವಾನ್ ಚಿಕ್ಕಮಗಳೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.