ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜಿಪ ಸಮೀಪದ ಕೋಟೆಕಣಿ ನಿವಾಸಿ ಸಿರಾಜುದ್ದೀನ್‌ರವರು ಇತ್ತೀಚೆಗೆ ಸೌದಿ ಅರೇಬಿಯಾದ ರಿಯಾದಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮರಣಹೊಂದಿದ್ದು ಅವರ ಅಂತ್ಯಕ್ರಿಯೆಯನ್ನು ರಿಯಾದ್ ನಸೀಮ್ ಸಾರ್ವಜನಿಕ ದಫನ ಭೂಮಿಯಲ್ಲಿ ಕೆಸಿಎಫ್ ರಿಯಾದ್ ಝೋನ್ ಸಾಂತ್ವನ ಇಲಾಖೆಯ ನೇತೃತ್ವದಲ್ಲಿ ನಡೆಸಲಾಯಿತು.
ಈದುಲ್ ಫಿತ್ರ್ ಇದರ ಮೊದಲ ದಿನ ರಸ್ತೆ ದಾಟುವಾಗ ಎದುರು ದಿಕ್ಕಿನಿಂದ ಅತಿ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮವಾಗಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತ ಸಂಭವಿಸಿದ ಮಾಹಿತಿ ಸಿಕ್ಕ ಕೂಡಲೇ ಕರ್ನಾಟಕ ಕಲ್ಚರಲ್ ಫೌಂಡೇಶನ್ (KCF) ರಿಯಾದ್ ಝೋನ್ ಕಾರ್ಯಕರ್ತರು ಸ್ಥಳಕ್ಕೆ ಆಗಮಿಸಿದ್ದಾರೆ.
ಸೌದಿ ಅರೇಬಿಯಾದಲ್ಲಿ ವಿದೇಶಿಗಳು ಯಾರಾದರೂ ಮರಣಹೊಂದಿದರೆ ಅವರ ಅಂತ್ಯಕ್ರಿಯೆಗೆ ಹಲವಾರು ದಾಖಲೆಗಳನ್ನು ಮಾಡಬೇಕಾಗಿದ್ದು, ಅದರಂತೆ ಭಾರತೀಯ ರಾಯಭಾರಿ ಕಚೇರಿ, ಸ್ಥಳೀಯ ಆರೋಗ್ಯ ಇಲಾಖೆ, ಸೌದಿ ವಲಸೆ ಪ್ರಾಧಿಕಾರ, ಕಾರ್ಮಿಕ ಇಲಾಖೆ ಸೇರಿದಂತೆ ವಿವಿಧ ಕಡೆಗಳಿಂದ ಬೇಕಾದ ಕಡತಗಳನ್ನು ಸರಿಪಡಿಸಲು ಸೌದಿ ಅರೇಬಿಯಾದ ಕೆಸಿಎಫ್ ರಾಷ್ಟ್ರೀಯ ಸಮಿತಿ ನಾಯಕರಾದ ಅಬ್ದುಸಲಾಂ ಹಳೆಯಂಗಡಿ, ಭಾಷಾ ಗಂಗಾವಳಿ ಕೆಸಿಎಫ್ ರಿಯಾದ್ ಝೋನ್ ಸಾಂತ್ವನ ಇಲಾಖೆಯ ನಾಯಕರಾದ ಮಜೀದ್ ವಿಟ್ಲ, ಅಶ್ರಫ್ KMS, ದಾವೂದ್ ಸಅದಿ, ಸಿರಾಜ್ ಇನ್ನಿತರ ನೇತಾರರು ಮುಂಚೂಣಿಯಲ್ಲಿದ್ದುಕೊಂಡು ಎಲ್ಲಾ ಕಾರ್ಯಗಳನ್ನು ಯಾವುದೇ ಕುಂದುಕೊರತೆಗಳಿಲ್ಲದಂತೆ ಚೆನ್ನಾಗಿ ನಿಭಾಯಿಸಿದ್ದಾರೆ.
ರಿಯಾದಿನ ಅಲ್-ನಸೀಮ್ ಸಾರ್ವಜನಿಕ ದಫನ ಭೂಮಿಯಲ್ಲಿ ನಡೆದ ಜನಾಝ ನಮಾಝ್ ಮತ್ತು ದಫನ ಕಾರ್ಯದಲ್ಲಿ ಕೆಸಿಎಫ್ ರಾಷ್ಟ್ರೀಯ ನಾಯಕರು ಝೋನ್ ನಾಯಕರು ಕಾರ್ಯಕರ್ತರು ಕುಟುಂಬಸ್ಥರು ಹಾಗೂ ಸ್ಥಳೀಯರು ಪಾಲ್ಗೊಂಡಿದ್ದರು.
















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ