ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆಸಿಎಫ್) ಸೌದಿ ಅರೇಬಿಯಾ ರಾಷ್ಟ್ರೀಯ ಮಟ್ಟದ ಪ್ರತಿಭೋತ್ಸವವು “ಅರಳುವ ಕನಸು ಉತ್ಸಾಹದ ಬೆಳಕು” ಎಂಬ ದೋಷ ವಾಕ್ಯದೊಂದಿಗೆ ಜೂನ್ 09 ರಂದು ದಮ್ಮಾಮಿನ ಉಮ್ಮು ಅಲ್ ಸಾಹಿಕ್ ನಲ್ಲಿರುವ ಸಅದಿ ರೆಸಾರ್ಟ್ ನಲ್ಲಿ ವಿಜೃಂಭಣೆಯಿಂದ ನಡೆಯಲಿದೆ.
ರಾಷ್ಟ್ರೀಯ ಸಮಿತಿ ಅಧೀನದಲ್ಲಿರುವ 7 ಝೋನ್ ಗಳಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾದ ಸರಿಸುಮಾರು 100ರಷ್ಟು ಸ್ಪರ್ಧಾರ್ಥಿಗಳು 4 ವಿಭಾಗದಲ್ಲಿ ನಡೆಯುವ 37 ಸ್ಪರ್ಧೆಗಳಲ್ಲಿ ತಮ್ಮ ಪ್ರತಿಭೆಯನ್ನು ತೋರಿಸಲಿದ್ದಾರೆ.
ಈ ಕಾರ್ಯಕ್ರಮಕ್ಕೆ ಕೆಸಿಎಫ್ ಅಂತರಾಷ್ಟ್ರೀಯ ಸಮಿತಿ ಅಧ್ಯಕ್ಷರಾದ ಡಿಪಿ ಯೂಸುಫ್ ಸಖಾಫಿ ಬೈತಾರ್, ಭಾರತೀಯ ರಾಯಭಾರಿ ಕಚೇರಿಯ ಕಾರ್ಯದರ್ಶಿಗಳಾದ ಮುಹಮ್ಮದ್ ಶಬೀರ್, ಮೊಇನ್ ಅಕ್ತರ್, ಕೆಸಿಎಫ್ ಬಹರೈನ್ ರಾಷ್ಟ್ರೀಯ ಅಧ್ಯಕ್ಷರಾದ ಜಮಾಲುದ್ದೀನ್ ವಿಟ್ಲ ಹಾಗೂ ಸಾಮಾಜಿಕ ಕಾರ್ಯಕರ್ತ ಶಿಹಾಬ್ ಕೊಟ್ಟುಕಾಡ್ ರವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಕೆಸಿಎಫ್ ಸೌದಿ ಅರೇಬಿಯಾ ರಾಷ್ಟ್ರಾಧ್ಯಕ್ಷರಾದ ನಝೀರ್ ಹಾಜಿ ಕಾಶಿಪಟ್ನ ಹಾಗೂ ಪ್ರತಿಭೋತ್ಸವ ಸ್ವಾಗತ ಸಮಿತಿ ಚೇರ್ಮಾನ್ ಫೈಸಲ್ ಕೃಷ್ಣಾಪುರ ರವರು ಜನಧ್ವನಿ ವಾರ್ತೆಗೆ ತಿಳಿಸಿದ್ದಾರೆ.