janadhvani

Kannada Online News Paper

ದ.ಕ.ಜಿಲ್ಲೆಯಲ್ಲಿ ನೈತಿಕ ಪೊಲೀಸ್‌ಗಿರಿಗೆ ಅಂತ್ಯ- ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್

ದಕ್ಷಿಣ ಕನ್ನಡ ಪ್ರಜ್ಞಾವಂತ ಜಿಲ್ಲೆ. ಇಲ್ಲಿ ಜನ ಸಹೋದರತೆಯಿಂದ ಬದುಕಿ ಬಾಳಬೇಕು.

ಬೆಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೈತಿಕ ಪೊಲೀಸ್‌ಗಿರಿಗೆ ಅಂತ್ಯಹಾಡುವುದಾಗಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಉಸ್ತುವಾರಿಯಾಗಿ ನೇಮಕಗೊಂಡ ಬೆನ್ನಲ್ಲೇ ವಿಕಾಸಸೌಧದಲ್ಲಿ ಮಾತನಾಡಿದ ಅವರು, ದಕ್ಷಿಣ ಕನ್ನಡದಲ್ಲಿ ಜನ ಶಾಂತಿ ಸೌಹಾರ್ಧತೆಯಿಂದ ಬಾಳಬೇಕು ಎಂದು ಆರೋಗ್ಯ ಸಚಿವ ಗುಂಡೂರಾವ್ ಹೇಳಿದ್ದಾರೆ.

ದಕ್ಷಿಣ ಕನ್ನಡ ಪ್ರಜ್ಞಾವಂತ ಜಿಲ್ಲೆ. ಇಲ್ಲಿ ಜನ ಸಹೋದರತೆಯಿಂದ ಬದುಕಿ ಬಾಳಬೇಕು. ಇದಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳತ್ತೇವೆ ಎಂದು ಗುಂಡುರಾವ್ ಹೇಳಿದ್ದಾರೆ.

ನಾನೇನು ಯಾವ ಜಿಲ್ಲೆಗೂ ಬೇಡಿಕೆ ಇಟ್ಟಿರಲಿಲ್ಲ, ಇದು ಮುಖ್ಯಮಂತ್ರಿಗಳ ನಿರ್ಧಾರವಾಗಿದೆ. ಯಾವ ಜಿಲ್ಲೆಗೆ ಹೋದರು ಕೆಲಸ ಮಾಡಬೇಕು ಎಂದು ಗುಂಡೂರಾವ್ ಹೇಳಿದ್ದಾರೆ.

ಇದೇ ವೇಳೆ ಚಾಮರಾಜನಗರ ಆಕ್ಸಿಜನ್ ದುರಂತ ಮರು ತನಿಖೆ ಮಾಡುವುದಾಗಿ ಪುನರುಚ್ಚರಿಸಿದ್ದಾರೆ. ಮರುತನಿಖೆಗೆ ಸರ್ಕಾರಕ್ಕೆ ಹೇಳಿದ್ದೇನೆ, ಅದಕ್ಕೆ ಡಿಪಿಆರ್ ಕೂಡ ರೆಡಿಯಾಗುತ್ತಿದೆ. ಶೀಘ್ರದಲ್ಲೇ ಅಧಿಕೃತವಾಗಿ ತನಿಖೆಗೆ ಆದೇಶ ಹೊರಬೀಳಲಿದೆ ಎಂದು ಗುಂಡೂರಾವ್ ಹೇಳಿದ್ದಾರೆ.

error: Content is protected !! Not allowed copy content from janadhvani.com