ರಿಯಾದ್: ಏಕೀಕೃತ ಸಂದರ್ಶಕ ವೀಸಾ ಮತ್ತು ಪ್ರವಾಸೋದ್ಯಮ ಕ್ಯಾಲೆಂಡರ್ ಅನ್ನು ಪರಿಚಯಿಸಲು ಎರಡು ಗಲ್ಫ್ ರಾಷ್ಟ್ರಗಳು ತಾತ್ವಿಕವಾಗಿ ಒಪ್ಪಿಕೊಂಡಿವೆ.
ಸೌದಿ ಅರೇಬಿಯಾ ಮತ್ತು ಒಮಾನ್ ಏಕೀಕೃತ ಜಿಸಿಸಿ ಸಂದರ್ಶಕ ವೀಸಾದ ಕಲ್ಪನೆಯತ್ತ ಒಂದು ಹೆಜ್ಜೆ ಮುಂದಿಟ್ಟಿದೆ. ಇತ್ತೀಚೆಗೆ ಒಮಾನ್‌ಗೆ ಭೇಟಿ ನೀಡಿದ್ದ ಸೌದಿ ಪ್ರವಾಸೋದ್ಯಮ ಸಚಿವ ಅಹ್ಮದ್ ಅಲ್ ಖತೀಬ್ ಅವರು ಒಮಾನ್ ಹೆರಿಟೇಜ್ ಮತ್ತು ಪ್ರವಾಸೋದ್ಯಮ ಸಚಿವ ಸಲೀಂ ಅಲ್ ಮಹ್ರೂಕಿ ಅವರೊಂದಿಗೆ ನಡೆಸಿದ ಸಭೆಯಲ್ಲಿ ಈ ಸಂಬಂಧ ಒಪ್ಪಂದಕ್ಕೆ ಬರಲಾಗಿದೆ.
ಸೌದಿ ಅರೇಬಿಯಾ ಮತ್ತು ಒಮಾನ್ ಪ್ರವಾಸೋದ್ಯಮ ಸಚಿವರು ಉಭಯ ದೇಶಗಳಿಗೆ ಆಸಕ್ತಿಯ ಹಲವಾರು ಜಂಟಿ ಪ್ರವಾಸೋದ್ಯಮ ಯೋಜನೆಗಳ ಕುರಿತು ಚರ್ಚಿಸಿದರು. ಇಂತಹ ಯೋಜನೆಗಳು ಅಂತರಾಷ್ಟ್ರೀಯ ಪ್ರವಾಸಿಗರು ಮತ್ತು ಗಲ್ಫ್ ರಾಷ್ಟ್ರಗಳ ನಾಗರಿಕರು ಮತ್ತು ವಲಸಿಗರನ್ನು ಗುರಿಯಾಗಿರಿಸಿಕೊಂಡಿವೆ ಎಂದು ಸೌದಿ ಮಾಧ್ಯಮ ವರದಿ ಮಾಡಿದೆ.
ಸೌದಿ ಅರೇಬಿಯಾ ಮತ್ತು ಒಮಾನ್ ನಡುವೆ ಪ್ರವಾಸೋದ್ಯಮ ಋತುಗಳಲ್ಲಿ ಪ್ರಯಾಣದ ಬಗ್ಗೆ ಚರ್ಚೆಗಳು ನಡೆದವು. ಪ್ರವಾಸೋದ್ಯಮ ಕ್ಷೇತ್ರದಲ್ಲಿ ವ್ಯಾಪಾರ ಮತ್ತು ಹೂಡಿಕೆ ಸಹಕಾರದ ಸಾಧ್ಯತೆಗಳು ಮತ್ತು ಎರಡೂ ದೇಶಗಳ ಪ್ರವಾಸೋದ್ಯಮ ಕ್ಷೇತ್ರಗಳಿಗೆ ಹೂಡಿಕೆಗಳ ಆಸಕ್ತಿಯನ್ನು ಉತ್ತೇಜಿಸುವ ಕುರಿತು ಚರ್ಚೆಗಳು ಕೇಂದ್ರೀಕೃತವಾಗಿವೆ.
ಗಲ್ಫ್ ರಾಷ್ಟ್ರಗಳಿಗೆ ಷೆಂಗೆನ್ ವೀಸಾ ಮಾದರಿಯಲ್ಲಿ ಏಕೀಕೃತ ಸಂದರ್ಶಕ ವೀಸಾವನ್ನು ಪರಿಚಯಿಸುವ ಕುರಿತು ಜಿಸಿಸಿ ಮಟ್ಟದಲ್ಲಿ ಈ ಹಿಂದೆ ಚರ್ಚಿಸಲಾಗಿತ್ತು.
















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ