janadhvani

Kannada Online News Paper

ಮಸೂದ್,ಫಾಝಿಲ್ ಸೇರಿ ನಾಲ್ವರು ಯುವಕರ ಕುಟುಂಬಗಳಿಗೆ ತಲಾ 25 ಲಕ್ಷ ರೂ. ಪರಿಹಾರ ಘೋಷಣೆ

ಬೊಮ್ಮಾಯಿ ಸರಕಾರದ ಅವಧಿಯಲ್ಲಿ ಇವರ ಕುಟುಂಬಕ್ಕೆ ಪರಿಹಾರ ಕೊಡದೆ ತಾರತಮ್ಯ ಮಾಡಲಾಗಿತ್ತು.

ಮಂಗಳೂರು,ಜೂನ್.16:ದ.ಕ.ಜಿಲ್ಲೆಯಲ್ಲಿ ಮತೀಯ ದುಷ್ಕರ್ಮಿಗಳಿಂದ ಹತ್ಯೆಗೀಡಾಗಿ ಸರಕಾರದಿಂದ ಪರಿಹಾರ ಸಿಗದ ನಾಲ್ವರು ಯುವಕರ ಕುಟುಂಬಗಳಿಗೆ ಮುಖ್ಯಮಂತ್ರಿಯ ಪರಿಹಾರ ನಿಧಿಯಿಂದ ತಲಾ 25 ಲಕ್ಷ ರೂ. ಪರಿಹಾರ ಘೋಷಿಸಿ ರಾಜ್ಯ ಸರಕಾರ ಇಂದು ಆದೇಶ ಹೊರಡಿಸಿದೆ.

ಕಳೆದ ಜುಲೈ 19ರಂದು ಬೆಳ್ಳಾರೆಯ ಮಸೂದ್, 28ರಂದು ಮಂಗಳಪೇಟೆಯ ಮುಹಮ್ಮದ್ ಫಾಝಿಲ್ ಹತ್ಯೆಯಾಗಿತ್ತು. ಕಳೆದ ವರ್ಷದ ಡಿಸೆಂಬರ್ 24ರಂದು ಕಾಟಿಪಳ್ಳದ ಅಬ್ದುಲ್ ಜಲೀಲ್ ಹಾಗೂ 2018ರ ಜನವರಿ 3ರಂದು ಕಾಟಿಪಳ್ಳದ ದೀಪಕ್ ರಾವ್ ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದರು.

ರಾಜ್ಯ ಪೊಲೀಸ್ ಇಲಾಖೆಯ ಮಹಾನಿರ್ದೇಶಕರು ಸರಕಾರದ ವತಿಯಿಂದ ಪರಿಹಾರ ಧನ ಮಂಜೂರು ಮಾಡುವಂತೆ ಒಳಾಡಳಿತ ಇಲಾಖೆಯನ್ನು ಕೋರಿದ್ದರು. ಅದರಂತೆ ಪರಿಹಾರ ಬಿಡುಗಡೆ ಮಾಡಲಾಗಿದೆ.

ಬೊಮ್ಮಾಯಿ ಸರಕಾರದ ಅವಧಿಯಲ್ಲಿ ಇವರ ಕುಟುಂಬಕ್ಕೆ ಪರಿಹಾರ ಕೊಡದೆ ತಾರತಮ್ಯ ಮಾಡಲಾಗಿತ್ತು.ನೂತನ ಸರಕಾರ ಬಂದ ಬಳಿಕ ಪರಿಹಾರ ನೀಡಲು ಆಗ್ರಹ ಕೇಳಿ ಬಂದಿತ್ತು.

error: Content is protected !! Not allowed copy content from janadhvani.com