janadhvani

Kannada Online News Paper

ಚಿಕ್ಕಮಗಳೂರಿನಲ್ಲಿ ಮೌಲಾನ ಆಜಾದ್ ಅಲ್ಪಸಂಖ್ಯಾತರ ಭವನ ನಿರ್ಮಾಣ

ಕ್ಷೇತ್ರದ ಶಾಸಕರೊಂದಿಗೆ ಚರ್ಚಿಸಿ ಮುಂದಿನ ಆಗಸ್ಟ್ ತಿಂಗಳಲ್ಲಿ ಶಂಕುಸ್ಥಾಪನೆ ನೆರವೇರಲಿಸಲಾಗುವುದು

ಚಿಕ್ಕಮಗಳೂರು: ನಗರದ ಹೊರವಲದಲ್ಲಿರುವ ಜಿಲ್ಲಾ ಪಂಚಾಯ್ತಿ ಕಚೇರಿ ಸಮೀಪ 10 ಗುಂಟೆ ಜಾಗದಲ್ಲಿ ಸುಮಾರು ಒಂದು ಕೋಟಿ ಮೌಲ್ಯದ ವೆಚ್ಚದಲ್ಲಿ ಮೌಲಾನಾ ಆಜಾದ್ ಅಲ್ಪಸಂಖ್ಯಾತರ ಭವನ ನಿರ್ಮಾಣಕ್ಕೆ ಸರ್ಕಾರದಿಂದ ಭೂಮಿ ಮಂಜೂರಾಗಿದೆ ಎಂದು ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷರಾದ ಅಲ್ ಹಾಜ್ ಮೊಹಮ್ಮದ್ ಶಾಹಿದ್ ರಜ್ವಿ ರವರು ತಿಳಿಸಿದ್ದಾರೆ.

ಚಿಕ್ಕಮಗಳೂರು ತಾಲೂಕು ಕಸಬಾ ಹೋಬಳಿ ಹಿರೇಮಗಳೂರು ಗ್ರಾಮದ ಸರ್ವೆ ನಂ.1019 ರಲ್ಲಿ 10 ಗುಂಟೆ ಪ್ರದೇಶವನ್ನು ಮೌಲಾನಾ ಆಜಾದ್ ಅಲ್ಪಸಂಖ್ಯಾತರ ಭವನ ನಿರ್ಮಾಣಕ್ಕಾಗಿ ಮಾನ್ಯ ಜಿಲ್ಲಾಧಿಕಾರಿಗಳು ಚಿಕ್ಕಮಗಳೂರು ರವರ ಆದೇಶ ಸಂಖ್ಯೆ M4LNDC.R 586 ಮತ್ತು 585/2016-17 ದಿನಾಂಕ 18/01/2018 ಮತ್ತು 22/01/2018 ರಂತೆ ಕಾಯ್ದಿರಿಸಿ ಜಮೀನನ್ನು ಮಂಜೂರು ಮಾಡಲಾಗಿದೆ.

ಇದಕ್ಕೆ ಸಂಬಂಧಿಸಿದಂತೆ ಸದರಿ ಕಟ್ಟಡದಲ್ಲಿ 1)ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ 2)ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ
3)ಜಿಲ್ಲಾ ವಕ್ಫ್ ಸಲಹಾ ಸಮಿತಿ

ಒಳಗೊಂಡಂತೆ 3 ಕಾರ್ಯಾಲಯಗಳು ಕಾರ್ಯ ನಿರ್ವಹಿಸಲು ಸೂಕ್ತ ಸೌಲಭ್ಯ ಒದಗಿಸಲಾಗುವುದು ಎಂದು ರಜ್ವಿ ರವರು ತಿಳಿಸಿದ್ದಾರೆ.

ಕ್ಷೇತ್ರದ ಶಾಸಕರೊಂದಿಗೆ ಚರ್ಚಿಸಿ ಮುಂದಿನ ಆಗಸ್ಟ್ ತಿಂಗಳಲ್ಲಿ ಶಂಕುಸ್ಥಾಪನೆ ನೆರವೇರಲಿಸಲಾಗುವುದು. ಇದಕ್ಕೆ ಸಂಬಂಧಿಸಿದಂತೆ ಜಿಲ್ಲೆಗೆ ಅಲ್ಪಸಂಖ್ಯಾತ ಭವನ ಮತ್ತು ಜಿಲ್ಲಾ ವಕ್ಫ್ ಮಂಡಳಿ ಕಚೇರಿ ನಿರ್ಮಾಣಕ್ಕೆ ಭೂಮಿ ಮಂಜೂರು ಮಾಡಿಸಲು ಸಹಕರಿಸಿದ ಶಾಸಕರು ಮತ್ತು ಜಿಲ್ಲಾಧಿಕಾರಿಗಳಿಗೆ ವಕ್ಫ್ ಮಂಡಳಿ ಅಧ್ಯಕ್ಷರು ಕೃತಜ್ಞತೆ ಸಲ್ಲಿಸಿದ್ದಾರೆ ಎಂದು ಜಿಲ್ಲಾ ವಕ್ಫ್ ಮಂಡಳಿ ಉಪಾಧ್ಯಕ್ಷರಾದ ಹಾಜಿ ಫೈರೋಜ್ ಅಹಮದ್ ರಜ್ವಿ ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

error: Content is protected !! Not allowed copy content from janadhvani.com