ರಿಯಾದ್: ಸೌದಿ ಅರೇಬಿಯಾದ ಪೂರ್ವ ಪ್ರಾಂತ್ಯದ ಕಾರ್ಯಾಗಾರವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಐವರು ಭಾರತೀಯರು ಸೇರಿದಂತೆ ಹತ್ತು ಮಂದಿ ಸುಟ್ಟು ಕರಕಲಾದ ಘಟನೆ ವರದಿಯಾಗಿದೆ.
ಇಲ್ಲಿನ ಅಲ್ ಅಹ್ಸಾದ ಹುಫೂಫ್ನ ಕೈಗಾರಿಕಾ ಪ್ರದೇಶದಲ್ಲಿನ ಕಾರ್ ವರ್ಕ್ಶಾಪ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.ಸ್ಥಳೀಯ ಕಾಲಮಾನ ಅಪರಾಹ್ನ 4.15 ಸುಮಾರಿಗೆ ಈ ಭೀಕರ ದುರಂತ ನಡೆದಿದೆ.
ಈ ಅವಘಡದಲ್ಲಿ ವರ್ಕ್ಶಾಪ್ನ ಮೇಲೆ ವಿಶ್ರಾಂತಿ ಪಡೆಯುತ್ತಿದ್ದ ಹತ್ತು ಉದ್ಯೋಗಿಗಳು ಮೃತಪಟ್ಟಿದ್ದಾರೆ. ಶುಕ್ರವಾರ ರಜಾ ದಿನವಾದ್ದರಿಂದ ಬೆಳಗಿನ ಜಾವದವರೆಗೂ ದುಡಿದು ಮಲಗಿದ್ದವರು ಅವಘಡದಲ್ಲಿ ಮರಣ ಹೊಂದಿದ್ದಾರೆ.
ಮೃತರಲ್ಲಿ ಎಂಟು ಮಂದಿಯ ದೇಶದ ವಿವರಗಳನ್ನು ಗುರುತಿಸಲಾಗಿದೆ. ಅವರಲ್ಲಿ ಐವರು ಭಾರತೀಯರು ಮತ್ತು ಮೂವರು ಬಾಂಗ್ಲಾದೇಶದವರಾಗಿದ್ದಾರೆ. ಇಬ್ಬರ ಗುರುತು ಪತ್ತೆಯಾಗಿಲ್ಲ. ಹೆಚ್ಚಿನ ವಿವರಗಳನ್ನು ಬಿಡುಗಡೆ ಮಾಡಲಾಗಿಲ್ಲ. ಸುಮಾರು 10 ಅಗ್ನಿಶಾಮಕ ದಳಗಳು ಬೆಂಕಿಯನ್ನು ಹತೋಟಿಗೆ ತಂದಿವೆ.
ಮೃತದೇಹಗಳನ್ನು ಅಲ್ ಅಹ್ಸಾ ಸೆಂಟ್ರಲ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ವಾರಾಂತ್ಯದ ರಜೆ ಇರುವ ಕಾರಣ ಭಾನುವಾರ ಮಾತ್ರ ಮೃತರ ಹೆಚ್ಚಿನ ವಿವರ ಲಭ್ಯವಾಗಲಿದೆ.
















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು